e-ಸುದ್ದಿ, ಮಸ್ಕಿ
ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ಪರವಾಗಿ ಮಂಗಳವಾರ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಸೇರಿದಂತೆ ಅನೇಕ ಮುಖಂಡರು ಕ್ಷೇತ್ರದ ಸರ್ಜಾಪೂರ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಅಮರೇಗೌಡ ಪಾಟೀಲ ಬಯ್ಯಾಪೂರು ಸರ್ಜಾಪುರ ಗ್ರಾಮದಲ್ಲಿ ಮಾತನಾಡಿ ಪ್ರತಾಪಗೌಡ ಪಾಟೀಲ ಹಣಕ್ಕೆ ಮಾರಿಕೊಂಡ ವ್ಯಕ್ತಿ, ಅಂತವರಿಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಮೂಲಕ ಕ್ಷೇತ್ರದ ಸ್ವಾಭಿಮಾನ ಎತ್ತಿ ಹಿಡಿಯಬೇಕು ಎಂದರು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ಅವರು ಹೆಚ್ಚಿನ ಮತಗಳಿಂದ ಆಯ್ಕೆಯಾಗಲಿದ್ದಾರೆ, ಕಾರ್ಯಕರ್ತರು ಯಾವುದೇ ಭಯವಿಲ್ಲದೆ ಕೆಲಸ ಮಾಡಬೇಕು ಎಂದರು.
ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ ಪಕ್ಷಾಂತರಿಗಳಿಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ, ಮುಖಂಡ ಶರಣಪ್ಪ ಮೇಟಿ, ಪಾಮಯ್ಯ ಮುರಾರಿ, ಎಚ್. ಬಿ. ಮುರಾರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಗುಂಡಪ್ಪ ನಾಯಕ ಸೇರಿದಂತೆ ಕಾಂಗ್ರೆಸ್ ಇತರರು ಇದ್ದರು.
ಮಾನ್ವಿ ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ಪರವಾಗಿ ಕೆಪಿಸಿಸಿ ಕಾರ್ಯದರ್ಶಿ ಎನ್. ಎಸ್. ಬೋಸರಾಜ, ಮಾಜಿ ಶಾಸಕ ಹಂಪಯ್ಯ ಸಾಹುಕಾರ ಮತಯಾಚನೆ ಮಾಡಿದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ರಾಜೀನಾಮೆ ನೀಡಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರತಾಪಗೌಡ ಪಾಟೀಲರಿಗೆ ಮತದಾರರು ತಕ್ಕ ಪಾಠ ಕಲಿಸುವಂತೆ ಮನವಿ ಮಾಡಿದರು