e-ಸುದ್ದಿ, ಮಸ್ಕಿ
ಏಪ್ರಿಲ್ 17 ರಂದು ನಡೆಯುವ ಮಸ್ಕಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕ್ಷೇತ್ರ ವ್ಯಾಪ್ತಿಯ ನಾನಾ ಹಳ್ಳಿಗಳಿಗೆ ಭಾನುವಾರ ತೆರಳಿ ಪ್ರಚಾರ ಕಾರ್ಯ ನಡೆಸಿದರು.
ತಲೇಖಾನ್, ಕನ್ನಾಳ, ಮೆದಿಕಿನಾಳ, ನಾಗರಬೆಂಚಿ, ಅಡವಿಭಾವಿ, ಮಾರಲದಿನ್ನಿ, ಸರ್ಜಾಪೂರು ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಸುಡು ಬಿಸಿಲಿನ ನಡುವೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡಿ ಬಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿದರು.
ಮೆದಕಿನಾಳ ಗ್ರಾಮದಲ್ಲಿ ಮಾತನಾಡಿದ ವಿಜಯೇಂದ್ರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಗುರಿತಿಸಿ ಮಸ್ಕಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಅಭೂತ ಪೂರ್ವ ಬೆಂಬಲವನ್ನು ನೀಡಿ ಜನರು ಅತಿ ಹೆಚ್ಚು ಅಂತರ ಮತಗಳಿಂದ ಪ್ರತಾಪಗೌಡರನ್ನು ಗೆಲ್ಲಿಸುತ್ತಾರೆ ಎಂದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆಲೆ ಇಲ್ಲದಂತಾಗಿದೆ. ಮಸ್ಕಿಯಲ್ಲಿ ಅವರ ಆಟ ನಡೆಯುವುದಿಲ್ಲ ಎಂದರು. ಕ್ಷೇತ್ರದ ಅಭಿವೃದ್ಧಿಗಾಗಿ ಮತದಾರರು ಪ್ರತಾಪಗೌಡ ಪಾಟೀಲರಿಗೆ ಮತ ನೀಡಿ ಆಯ್ಕೆ ಮಾಡಿ ಎಂದು ಮನವಿ ಮಾಡಿದರು. ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿದರು.
ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರ ಶಾಸಕ ನಡಹಳ್ಳಿ ಬಳಗಾನೂರು ಪಟ್ಟಣದಲ್ಲಿ ಪ್ರಚಾರ ನಡೆಸಿದರು. ಶೇಖರಪ್ಪ ಮೇಟಿ, ಬುಳ್ಳನಗೌಡ, ವೀರುಪಣ್ಣ ಗುತ್ತೇದಾರ, ಗೋವಿಂದರಡ್ಡಿ ಸೇರಿದಂತೆ ಇನ್ನಿತರರು ಇದ್ದರು.