ವೀರಶೈವ ಲಿಂಗಾಯತ ಧರ್ಮ ಒಡೆಯಲು ಯತ್ನಿಸಿದ ಕಾಂಗ್ರೆಸ್- ಬಿ.ವೈ. ವಿಜಯೇಂದ್ರ ಆರೋಪ

 

 

e-ಸುದ್ದಿ, ಮಸ್ಕಿ

 

ಮಸ್ಕಿ; ಅಖಂಡ ವೀರಶೈವ-ಲಿಂಗಾಯತ ಧರ್ಮ ಹೊಡೆಯಲು ಒಳ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ ಹಾಗೂ ಅದರ ನಾಯಕರಿಗೆ ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಕಾಂಗ್ರೆಸ್ ಪಕ್ಷಕ್ಕೆ   ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಪಟ್ಟಣದ ಬಾಳೇಕಾಯಿ ಮಿಲ್ನಲ್ಲಿ ಬುಧವಾರ ಸಂಜೆ ನಡೆದ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ ‘ವೀರಶೈವ ಲಿಂಗಾಯತ ಸಮಾಜ ಒಡೆಯುವದಕ್ಕೆ ಕೈ ಹಾಕಿದವರು ಯಾರೂ ಅಧಿಕಾರದಲ್ಲಿ ಉಳಿದಿಲ್ಲ. ಕಳೆದ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ವೀರಶೈವ ಸಮಾಜವನ್ನು ಒಡೆಯಲು ಹೋಗಿ ಮನೆ ಸೇರಿದ್ದು ಇತಿಹಾಸ ಎಂದರು.

ಬಿ.ಎಸ್. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಜೆಡಿಎಸ್ ನೊಂದಿಗೆ ಒಳ ಒಪ್ಪಂದ ಮಾಡಿಕೊಂಡ ಕಾಂಗ್ರೆಸ್ ರಾಜ್ಯದ ಜನರ ನೀಡಿದ್ದ ಜನಾದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಿತು. ಸತತ ಹೋರಾಟದ ಮೂಲಕ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಇದು ಕಾಂಗ್ರೆಸ್ ಮುಖಂಡರಿಗೆ ಅರಗಿಸಿಕೊಳ್ಳಲು ಸಾದ್ಯವಾಗುತ್ತಿಲ್ಲ ಎಂದು ವಿಜಯೇಂದ್ರ ಹೇಳಿದರು.

ಬಿ.ಎಸ್.ಯಡಿಯೂರಪ್ಪನವರು ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಪ್ರತಾಪಗೌಡ ಪಾಟೀಲ ಸೇರಿ 17 ಜನ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರತಾಪಗೌಡ ಪಾಟೀಲರನ್ನು ಗೆಲ್ಲಿಸಬೇಕಾಗಿದ್ದು ಪ್ರತಿಯೊಬ್ಬ ವೀರಶೈವ ಲಿಂಗಾಯತ ಸಮಾಜದವರ ಕರ್ತವ್ಯ ಎಂದರು.

ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಈಗಾಗಲೇ ನೆಲ ಕಚ್ಚಿದೆ. ಕ್ಷೇತ್ರದ ಎಲ್ಲೆಡೆ ಪ್ರತಾಪಗೌಡ ಪಾಟೀಲ ಹಾಗೂ ಬಿಜೆಪಿ ಪರ ಅಲೆ ಇದೆ. ಉಪ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭೀತಿಯಿಂದ ಕಾಂಗ್ರೆಸ್ ಮುಖಂಡರು  ಕ್ಷೇತ್ರದ ಕೆಲಕಡೆ ಗಲಾಟೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

ನಂತರ ಶಾಸಕ ಎ.ಎಸ್. ನಡಹಳ್ಳಿ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಸ್ತಿತ್ವಕ್ಕೆ ಬರಲು ಪ್ರತಾಪಗೌಡ ಪಾಟೀಲ್ ಅವರ ಕೊಡುಗೆ ಅಪಾರವಾಗಿದೆ. ವೀರಶೈವ ಸಮಾಜ ಸದಾ ಬಿಜೆಪಿ ಪಕ್ಷದ ಬೆಂಬಲಕ್ಕಿದೆ. ಯಡಿಯೂರಪ್ಪ ಕೇವಲ ವೀರಶೈವ ಸಮಾಜಕ್ಕೆ ಮಾತ್ರ ನಾಯಕರಲ್ಲ  ಎಲ್ಲಾ ಸಮುದಾಯದ ಜನರ ನಾಯಕ. ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ವಿರಶೈವ ಏತರ ಶಾಸಕರು ರಾಜಿನಾಮೆ ನೀಡಿ ಮುಖ್ಯಮಂತ್ರಿ ಮಾಡಿರುವುದೇ ಸಾಕ್ಷಿ ಎಂದು ನಡಹಳ್ಳಿ ಪ್ರತಿಪಾದನೆ ಮಾಡಿದರು. ಈ ಉಪಚುನಾವಣೆಯಲ್ಲಿ ಪ್ರತಿಯೊಬ್ಬ ವೀರಶೈವ ಬಂದುಗಳು ಬಿಜೆಪಿ ಪಕ್ಷಕ್ಕೆ ಬೆಂಬಲಿಸಿ ಪ್ರತಾಪಗೌಡ ಪಾಟೀಲ್ ಅವರನ್ನು ಅತ್ಯಂತ ಹೆಚ್ಚು ಮತಗಳು ನೀಡುವ ಮೂಲಕ ಅವರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.

ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿ ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಯಡಿಯೂರಪ್ಪನರವ ವಯಸ್ಸಿಗೂ ಬೆಲೆ ಕೊಡದೆ ಸೋಲುವ ಭೀತಿಯಿಂದ ಏಕ ವಚನದಲ್ಲಿ ಮಾತನಾಡುವ ಮೂಲಕ ಸಣ್ಣತನಕ್ಕೆ ಇಳಿದಿದ್ದಾರೆ ಎಂದರು.

ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಆನ್ವರಿ ಮಾತನಾಡಿ ಪ್ರತಾಪಗೌಡ ಪಾಟೀಲರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು,

ಸಂಸದ ಕರಡಿ ಸಂಗಣ್ಣ, ಕೃಷ್ಣಪ್ಪ, ಪರಣ್ಣ ಮನವಳ್ಳಿ ಮಾತನಾಡಿ ವೀರಶೈವ ಲಿಂಗಾಯತ ಸಮಾಜದವರು ಒಗ್ಗಟ್ಟಾಗಿ ಬಿಜೆಪಿ ಪರ ಮತ ನೀಡಬೇಕು ಎಂದರು.

ಶಾಸಕರಾದ ಕೃಷ್ಣಪ್ಪ, ಡಾ. ಶಿವರಾಜ ಪಾಟೀಲ್, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ಮಾಜಿ ಎಂಎಲ್ಸಿ ಮನೋಹರ ಮಸ್ಕಿ, ಹನುಮನಗೌಡ ಬೇಳಗುರ್ಕಿ, ಡಾ.ಶಿವಶರಣಪ್ಪ ಇತ್ಲಿ, ಡಾ.ಬಿ.ಎಚ್.ದಿವಟರ್,  ಸೇರಿದಂತೆ ಅನೇಕ ಮುಖಂಡರು ಇದ್ದರು.

 

 

Don`t copy text!