e-ಸುದ್ದಿ, ಮಸ್ಕಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆಯುವ ಧೀಮಂತ ನಾಯಕ. ಈ ಬಾರಿ ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಗೆದ್ದರೆ ಮಂತ್ರಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಮುದ್ದೆಬಿಹಾಳ ಶಾಸಕ ಎಎಸ್.ನಡಹಳ್ಳಿ ಹೇಳಿದರು.
ಮಸ್ಕಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರ ಬಿಜೆಪಿ ಶಾಸಕ ಎ.ಎಸ್.ನಡಹಳ್ಳಿ ಮಸ್ಕಿ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಮಂಗಳವಾರ ಪ್ರಚಾರ ನಡೆಸಿದರು.
ಗುಡದೂರು, ಬಳಗಾನೂರು ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಸುಡು ಬಿಸಿಲಿನ ನಡುವೆ ಮನೆಮನೆಗೆ ತೆರಳಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ನಂತರ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ನಡಹಳ್ಳಿ ರಾಜ್ಯದ ಅಭಿವೃದ್ಧಿಗಾಗಿ ಸಿ.ಎಂ. ಸಿದ್ದರಾಗಿದ್ದಾರೆ. ಆದ್ದರಿಂದ ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಉಪಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಬೆಂಬಬಲಿಸುವ ಮೂಲಕ ಕ್ಷೇತ್ರದ ಅಭಿವೃದ್ದಿಗಾಗಿ ಕೈಜೋಡಿಸಬೇಕು ಎಂದರು.
ಬಿಜೆಪಿ ಮತ್ತು ಪಕ್ಷದ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳು ಬರುವ ಎ.17ರಂದು ಮತದಾರರ ಮನೊಲಿಸಿ ಮತಗಟ್ಟೆಗೆ ಕರೆತಂದು ಮಾತದಾನ ಮಾಡಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ಗೆಲುವು ನೀಡಿ ಮಸ್ಕಿ ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶ ಪ್ರತಾಪಗೌಡ ಪಾಟೀಲ್ ಅವರಿಗೆ ಕಲ್ಪಿಸಿ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರು 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.