ಸಾಹಿತ್ಯ ಕ್ಷೇತ್ರದ ಅನರ್ಘ್ಯ ರತ್ನ, ಫ್ರೋ.ಜಿ.ವೆಂಕಟಸುಬ್ಬಯ್ಯ

ನುಡಿ ನಮನ

ಸಾಹಿತ್ಯ ಕ್ಷೇತ್ರದ ಅನರ್ಘ್ಯ ರತ್ನ, ಫ್ರೋ.ಜಿ.ವೆಂಕಟಸುಬ್ಬಯ್ಯ

ಪ್ರೊ||ಗಂಜಾಂ ವೆಂಕಟಸುಬ್ಬಯ್ಯ (೨೩ ಆಗಸ್ಟ್ ೧೯೧೩ – ೧೯ ಏಪ್ರಿಲ್ ೨೦೨೧) ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ತಜ್ಞರು. ಇವರ ‘ಇಗೋ ಕನ್ನಡ’ ಎಂಬ ಪ್ರಜಾವಾಣಿ ಅಂಕಣ ಸಮಸ್ತ ಕನ್ನಡಿಗರಿಗೆ ಪರಿಚಿತವಾಗಿದೆ. ೧೯೯೧ರಿಂದ ವೆಂಕಟಸುಬ್ಬಯ್ಯನವರು ಈ ಅಂಕಣದ ಮೂಲಕ ಕನ್ನಡ ಭಾಷೆಯ ಪದಗಳನ್ನು ಓದುಗರಿಗೆ ಹತ್ತಿರಗೊಳಿಸಿದವರು. ಇವರ ಭಾಷ ಸಾಹಿತ್ಯ
ಕೊಡುಗೆಗೆ ೨೦೦೫ರಲ್ಲಿ, ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಇವರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ನೀಡಿದೆ. ಇವರು ಬೆಂಗಳೂರಿನಲ್ಲಿ ನಡೆದ ೭೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಜೀವನಸಂಪಾದಿಸಿ

೧೯೧೩ರಲ್ಲಿ ಮೈಸೂರಿನಲ್ಲಿ ಜನಿಸಿ, ಬೆಳೆದ ವೆಂಕಟಸುಬ್ಬಯ್ಯನವರ ತಂದೆ ಗಂಜಾಂ ತಿಮ್ಮಣ್ಣಯ್ಯನವರು. ಸಂಸ್ಕೃತ ಹಾಗು ಕನ್ನಡದ ವಿದ್ವಾಂಸರಾಗಿದ್ದರು. ೧೯೩೭ರಲ್ಲಿ ಮೈಸೂರು ಮಹಾರಾಜ ಕಾಲೇಜಿನಿಂದ ಎಂ.ಎ. ಪದವಿಯನ್ನು ಪಡೆದ ಇವರಿಗೆ ಪ್ರಥಮ ಸ್ಥಾನ ಪಡೆದದ್ದಕ್ಕಾಗಿ ಸುವರ್ಣಪದಕವನ್ನು ಬಹುಮಾನವಾಗಿ ಕೊಡಲಾಯಿತು. ಮುಂದೆ ಇವರು ಬಿ.ಟಿ. ಪದವಿಯನ್ನೂ ಕೂಡ ಪಡೆದರು. ೧೯೩೯ ರಿಂದ ಪ್ರಾರಂಭಿಸಿ ಸುಮಾರು ೪೦ ವರ್ಷಗಳ ಕಾಲ ಇವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವರು.[೨] ಕನ್ನಡ ಸಾರಸ್ವತ ಲೋಕದಲ್ಲಿ ಅವರು ಜಿ.ವಿ.ಎಂದೇ ಹೆಸರಾದವರು.

ಇಗೋ ಕನ್ನಡ
೧೨-೫-೯೧ ರಿಂದ ಕನ್ನಡದ ಜನಪ್ರಿಯ ಪತ್ರಿಕೆಯಾದ ಪ್ರಜಾವಾಣಿಯಲ್ಲಿ ಪುಟ್ಟ ಅಂಕಣವಾಗಿ ಪ್ರಾರಂಭವಾಯಿತು. ಕನ್ನಡದ ಶಿಷ್ಟ ಬರವಣಿಗೆಯನ್ನು ಸಾರ್ವಜನಿಕರಿಗೆ ತಿಳಿಯ ಪಡಿಸಲು ಆರಂಭಿಸಿದ ಈ ಅಂಕಣವು ಕೆಲವೇ ದಿನಗಳಲ್ಲಿ ಹಲವರ ಗಮನವನ್ನೂ, ಉತ್ಸಾಹವನ್ನೂ ತನ್ನತ್ತ ಸೆಳೆಯಿತು. ಕನ್ನಡವನ್ನು ಅಭ್ಯಾಸ ಮಾಡಿದವರಿಂದಲೂ, ಶ್ರೀಸಾಮಾನ್ಯರಿಂದಲೂ ಬಂದ ವೈವಿಧ್ಯಮಯ ಪ್ರಶ್ನೆಗಳಿಗೆ ಉತ್ತರ ನೀಡುವುದರಲ್ಲಿ ತೊಡಗಿಸಿಕೊಂಡ ಈ ಅಂಕಣ, ಹಲವರ ಭಾಷೆಗೆ ಸಂಬಂಧಿಸಿದ ಸಂದೇಹಗಳನ್ನು ನಿವಾರಣೆ ಮಾಡಿತು. ಇಂತಹ ಭಾಷೆಗೆ ಸಂಬಂಧಿಸಿದ ಪ್ರಶ್ನೋತ್ತರಗಳನ್ನು ಒಟ್ಟುಗೂಡಿಸಿ ವೆಂಕಟಸುಬ್ಬಯ್ಯನವರು ‘ಇಗೋ ಕನ್ನಡ’ ಎಂಬ ಹೆಸರಲ್ಲೇ ಒಂದು ಸಾಮಾಜಿಕ ನಿಘಂಟನ್ನು ಹೊರತಂದು ಸಾಹಿತ್ಯ ಕ್ಷೇತ್ರದಲ್ಲಿ ಅಜರಾಮರಾಗಿದ್ದಾರೆ.
ಪ್ರಶಸ್ತಿಗಳು

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.

ಪಂಪ ಪ್ರಶಸ್ತಿ (೨೦೧೪)

ನಾಡೋಜ ಪ್ರಶಸ್ತಿ (೨೦೦೫)

೧೯೭೪ ರಲ್ಲಿ ಬೀದರನಲ್ಲಿ ನಡೆದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ

೨೦೧೧ರಲ್ಲಿ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ೭೭ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ

೨೦೧೭ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ

೨೦೧೮ – ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ ಪಡೆದಿದ್ದರು.
—————————————————————————

ಬಂಡಾರ ಪ್ರಕಾಶನ ಮಸ್ಕಿ

ಅಕ್ಷರ ಸಾಹಿತ್ಯ ವೇದಿಕೆ ಮಸ್ಕಿ

ಇವರ ಸಹಯೋಗದಲ್ಲಿ
ಪ್ರೋ,ಜಿ ವೆಂಕಟಸುಬಯ್ಯ ಅವರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು, ಈ ಕಾರ್ಯಕ್ರಮ ದಲ್ಲಿ
ಜಿ ವೆಂಕಟಸುಬ್ಬಯ್ಯ ಅವರ ಪ್ರಮುಕ ಕೃತಿಯಾದ
ಇಗೋ ಕನ್ನಡ ಸಾಮಾಜಿಕ ನಿಘಂಟು ಕೃತಿಗೆ ಹೂ ಹಾಕುವ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ದಲ್ಲಿ
ಸಾಹಿತಿ ಗಳಾದ
ಆದಪ್ಪ ಎಂಬಾ ,ಗುಂಡುರಾವ್ ದೇಸಾಯಿ, ವರದೇಂದ್ರ ಕುರಡಿ,ಪರಶುರಾಮ ಕೋಡಗುಂಟಿ ಬಾಗವಹಿಸಿದ್ದರು

Don`t copy text!