ಮಧ್ಯಾಹ್ನ 2 ಗಂಟೆವರೆಗೆ ಮಾರ್ಕೆಟ್

 

ಮಧ್ಯಾಹ್ನ 2 ಗಂಟೆವರೆಗೆ ಮಾರ್ಕೆಟ್

e-ಸುದ್ದಿ, ಮಸ್ಕಿ

ಮಸ್ಕಿ : ಕೊವಿಡ್-19 ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಆದೇಶದಂತೆ ಗುರುವಾರದಿಂದ ಮೇ 24 ರವರೆಗೆ ಮದ್ಯಾಹ್ನ 2 ರಿಂದ ಬೆಳಿಗ್ಗೆ 6 ರ ವರೆಗೆ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ‌ ನಾಯಕ ತಿಳಿಸಿದ್ದಾರೆ.
ಬುಧವಾರ ಪಟ್ಟಣದಲ್ಲಿ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ 6 ರಿಂದ 2 ರ ವರೆಗೆ ಪಟ್ಟಣದಲ್ಲಿ ಮಾರ್ಕೆಟ್ ಗಳು ತೆರೆದಿರುತ್ತವೆ. 2 ರಿಂದ ಬೆಳಗಿನ 6 ರ ವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಕೊವಿಡ್ ನಿಯಂತ್ರಣ ಕ್ಕೆ ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರತಿ ಶನಿವಾರ ಹಾಗೂ ಭಾನುವಾರ ಸಂಪೂರ್ಣ ಕರ್ಪ್ಯೂ ಘೋಷಿಸಲಾಗಿದ್ದು ಸಾರ್ವಜನಿಕರು ಮನೆ ಬಿಟ್ಟು ಹೊರ ಬರಬಾರದು ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕ ರ ನಿತ್ಯದ ಸಾಮಾಗ್ರಿಗಳ ಖರೀದಿಗಾಗಿ ಬೆಳಿಗ್ಗೆ 6 ರಿಂದ 10 ರವರೆಗೆ ತರಕಾರಿ, ದಿನಿಸಿ ಹಾಲು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರ್ಪ್ಯೂ ಸಮಯದಲ್ಲಿ ಮನೆ ಬಿಟ್ಟು ಹೊರ ಬಂದರೆ ದಂಡ ಹಾಕುವ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಪಟ್ಟಣದಲ್ಲಿ ಕೊವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚದಂತೆ ತಡೆಯಲು ಸಾರ್ವಜನಿಕರು ಮಾಸ್ಕ್ ಕಡ್ಡಾಯವಾಗಿ ಹಾಕಿ ಕೊಳ್ಳಬೇಕು ಹಾಗೂ ಪರಸ್ಪರ ಅಂತರ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ

Don`t copy text!