ಕಾಯಕ ಮಹತ್ವ ಅರಹುವ ಶರಣರ ವಚನಗಳು

ಕಾಯಕ ಮಹತ್ವ ಅರಹುವ ಶರಣರ ವಚನಗಳು

“ದೇವ ಸಹಿತ ಮನೆಗೆ ಬಂದಡೆ ಕಾಯಕವಾವುದೆಂದು ಬೆಸಗೊಂಡಡೆ ನಿಮ್ಮಾಣೆ, ನಿಮ್ಮ ಪುರಾತರಾಣೆ! ತಲೆದಂಡ! ತಲೆದಂಡ! ತಲೆದಂಡ! ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಿಸಿದಡೆ ನಿಮ್ಮ ರಾಣಿವಾಸದಾಣೆ.”

“ಮನೆ ನೋಡಾ ಬಡವರು, ಮನ ನೋಡಾ ಘನ ಸೋಂಕಿನಲ್ಲಿ ಶುಚಿ; ಸರ್ವಾಂಗ ಕಲಿಗಳು.
ಪಸರಕ್ಕನುವಿಲ್ಲ; ಬಂದ ತತ್ಕಾಲಕ್ಕೆ ಉಂಟು.
ಕೂಡಲಸಂಗನ ಶರಣರು ಸ್ವತಂತ್ರ ಧೀರರು.”

“ಮನಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ
ಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿ
ಸದ್ಭಕ್ತಂಗೆ ಎತ್ತ ನೋಡಿದತ್ತ ಲಕ್ಷ್ಮಿ ತಾನಾಗಿಪ್ಪಳು
ಮಾರಯ್ಯಪ್ರಿಯ ಅಮರೇಶ್ವರ ಲಿಂಗದ
ಸೇವೆಯುಳ್ಳನ್ನಕ್ಕ

ಗುರು-ಲಿಂಗ-ಜಂಗಮಕ್ಕೆ ಕಾಯಕವೇ ಆಧಾರವಾಗಿದೆ ಎಂದು ಮನಂಬುಗುವಂತೆ ಹೇಳಿದ್ದಾರೆ.
“ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದರೂ ಮರೆಯಬೇಕು
ಲಿಂಗಪೂಜೆಯಾದರೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದರೂ ಹಂಗು ಹರಿಯಬೇಕು
ಕಾಯಕವೇ ಕೈಲಾಸವಾದ ಕಾರಣ
ಅಮರೇಶ್ವರ ಲಿಂಗವಾಯಿತ್ತಾದರೂ ಕಾಯಕದೊಳಗು

“ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ
ಸತ್ಯಶುದ್ಧವಿಲ್ಲದುದು ಕಾಯಕವಲ್ಲ
ಆಸೆಯೆಂಬುದು ಭವದ ಬೀಜ
ನಿರಾಸೆಯೆಂಬುದು ನಿತ್ಯಮುಕ್ತಿ
ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ.

ಶರಣರು ಕಾಯಕ ಜೀವಿಗಳು. ದುಡಿದು ಉಣ್ಣುವ, ಮಿಕ್ಕಿದ್ದನ್ನು ಸಂಗ್ರಹಿಸದೆ ಸಮಾಜದಲ್ಲಿರುವ ಬಡವರು, ದೀನರು, ದಲಿತರು ದಾಸೋಹ ಮಾಡುವ ಉದಾತ್ತ ವಿಚಾರ ನಡೆ ನುಡಿಯಿಂದ ಶ್ರೇಷ್ಠ ರಾದವರು. ಕಾಯಕ ಜೀವಿಗಳೆಲ್ಲ ಶರಣರು.

ಕವಿತಾ.ಮಳಗಿ, ‌ಕಲಬುರ್ಗಿ

 

 

Don`t copy text!