ಹಾಲಿ, ಮಾಜಿ ಶಾಸಕರಿಂದ ಮಾಲಾರ್ಪಣೆ ಮಸ್ಕಿ : ಮನೆ ಮನೆಗಳಲ್ಲಿ ಬಸವ ಜಯಂತಿ ಆಚರಣೆ

e-ಸುದ್ದಿ, ಮಸ್ಕಿ

12 ನೇ ಶತಮಾನದ ಸಮಾನತೆಯ ಹರಿಕಾರ ಜಗಜ್ಯೋತಿ ಬಸವೇಶ್ವರ ರ ಜಯಂತಿಯನ್ನು ಕೊವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದಲ್ಲಿ ವಿವಿಧೆಡೆ ಸರಳವಾಗಿ ಆಚರಿಸಲಾಯಿತು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರರ ಪ್ರತಿಮೆ ಶಾಸಕ ಬಸನಗೌಡ ತುರ್ವಿಹಾಳ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ಸೇರಿದಂತೆ ಇತರರು ಇದ್ದರು.
ತಹಶೀಲ್ದಾರ ಬಲರಾಮ ಕಟ್ಟಿಮನಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ ಬಸನಗೌಡ ಪೆÇಲೀಸ್ ಪಾಟೀಲ ಸೇರಿದಂತೆ ಅನೇಕರ ಮುಖಂಡರು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ವೀರಶೈವ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಚೇರಿ, ಬಿಜೆಪಿ, ಕಾಂಗ್ರೆಸ್ ಕಚೇರಿ, ಪುರಸಭೆ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಬಸವ ಜಯಂತಿ ಆಚರಿಸಲಾಯಿತು.
ಈ ಬಾರಿಯ ಬಸವ ಜಯಂತಿಯನ್ನು ಬಸವ ಭಕ್ತರು ಮನೆ ಮನೆಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಚನಗಳನ್ನು ಪಠಣ ಮಾಡುವ ಮೂಲಕ ಸರಳವಾಗಿ ಬಸವ ಜಯಂತಿಯನ್ನು ಆಚರಿಸಿದರು.
———————

ತಹಶೀಲ್ದಾರ್ ಅಸಮಾಧಾನ :
ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವಿಷಯ ತಹಶೀಲ್ದಾರ್ ಆದ ನನಗೆ ಪುರಸಭೆ ಮುಖ್ಯಾಧಿಕಾರಿ ಮಾಹಿತಿ ಮಾಡಿಲ್ಲ ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಬಸವ ವೃತ್ತದಲ್ಲಿ ನಡೆಯಿತು.
ಪುರಸಭೆ ಅಧ್ಯಕ್ಷರು, ಮಾಜಿ ಶಾಸಕರು ಮಾಲಾರ್ಪಣೆ ಮಾಡುತ್ತಿದ್ದ ವೇಳೆ ಆಗಮಿಸಿದ ತಹಶೀಲ್ದಾರ್ ಅವರಿಗೆ ಮಾಲಾರ್ಪಣೆ ಮಾಡುವಂತೆ ಮುಖ್ಯಾಧಿಕಾರಿಗಳು ಮೇಲಿಂದ ಮೇಲೆ ಹೇಳಿದ ನಂತರ ಮಾಲಾರ್ಪಣೆ ಮಾಡಿದರು.
ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದರಿಂದ ಮುಖ್ಯಾಧಿಕಾರಿಗಳು ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳಿಗೆ ಮುಂಚಿತವಾಗಿ ಮಾಹಿತಿ ನೀಡಬೇಕಾಗಿತ್ತು ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ಹೇಳಿದರು.

Don`t copy text!