e-ಸುದ್ದಿ, ಮಸ್ಕಿ
ನೂತನವಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ತುರ್ವಿಹಾಳ ತಮ್ಮ ಅಧಿಕೃತ ಸರ್ಕಾರಿ ಕಚೇರಿಯನ್ನು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ತಾಪಂ ಆಡಳಿತಾಧಿಕಾರಿ ನೇಮಕ ಃ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರದ ಅವಧಿ ಪೂರ್ಣಗೊಂಡಿದ್ದು ಆಡಳಿತಾಧಿಕಾರಿಯಾಗಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ ಬುಧವಾರ ಅಧಿಕಾರ ಸ್ವೀಕರಿಸಿದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ಹಾಹಕ ಅಧಿಕಾರಿ ಬಾಬು ರಾಠೋಡ, ಮ್ಯಾನೇಜರ್ ಗಂಗಾಧರ ಮೂರ್ತಿ ಇದ್ದರು.