e-ಸುದ್ದಿ, ಮಸ್ಕಿ
ಕರೋನಾ ತಡೆಗಟ್ಟುವುದಕ್ಕಾಗಿ ಜಿಲ್ಲಾಡಳಿತ ಒಂದು ವಾರಗಳ ಕಾಲ ಕಠಿಣ ಲಾಕ್ ಡೌನ್ ಜಾರಿ ಮಾಡಿದ್ದರೂ ಸಹ ನಿಯಮ ಉಲ್ಲಂಘಿಸಿ ರಸ್ತೆ ಮೇಲೆ ತಿರುಗಾಡುತ್ತಿದ್ದ 25ಕ್ಕೂ ಅದಿಕ ಬೈಕ್ ಗಳನ್ನು ಪಿಎಸ್ಐ ಸಿದ್ದರಾಮ ಬಿದರಾಣಿ ನೇತೃತ್ವದ ಪೊಲೀಸರು ಶುಕ್ರವಾರ ಜಪ್ತಿ ಮಾಡಿ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದರು.
ಮಸ್ಕಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕರೋನಾ ಪಾಸಿಟಿವ್ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರಿಂದ ತಾಲ್ಲೂಕು ಆಡಳಿತ, ಪುರಸಭೆ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಆದರೆ ಜನರು ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದು ಇದರಿಂದ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ ಆದ್ದರಿಂದ ಪೊಲೀಸ್ ಇಲಾಖೆ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಇಂದು ಮಸ್ಕಿಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ 25ಕ್ಕೂ ಅಧಿಕ ವಾಹನಗಳನ್ನು ಜಪ್ತಿ ಮಾಡಿ ಪೊಲೀಸರು ದಂಡ ವಿಧಿಸಿದರು.
ಕರೊನವನ್ನು ತಡೆಗಟ್ಟಲು ಪೊಲೀಸರೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪಿಎಸ್ಐ ಸಿದ್ದರಾಮ ಮನವಿ ಮಾಡಿದ್ದಾರೆ. ಅನವಶ್ಯಕವಾಗಿ ಯಾರಾದರು ವ್ಯಾಪಾರಸ್ಥರು ಅಂಗಡಿಗಳು ತೆರೆದದ್ದು ಕಂಡು ಬಂದರೆ ಅಂತವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು. ಅನವಶ್ಯವಾಗಿ ಮನೆಯಿಂದ ಹೊರ ಬಂದರೆ ಅಂತವರ ವಾಹನ ವಶಕ್ಕೆ ತೆಗೆದುಕೊಂಡು ದಂಡ ಹಾಕಲಾಗುವುದು ಎಂದು ಅವರು ತಿಳಿಸಿದರು.
ಇಲ್ಲಿನ ಮುದುಗಲ್ ರಸ್ತೆಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಇರುವ ಕೋವಿಡ್ ಆರೈಕೆ ಕೇಂದ್ರದಲ್ಲಿ 20 ಕ್ಕೂ ಅಧಿಕ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಆರೈಕೆ ಮಾಡಲಾಗುತ್ತಿದೆ ಎಂದು ಡಾ. ಮೌನೇಶ್ ಪೂಜಾರ ತಿಳಿಸಿದ್ದಾರೆ.