ಕರೊನಾ ನಿಯಂತ್ರಣ ಅಧ್ಯಕ್ಷರು ಪಿಡಿಓ ಜವಬ್ದಾರಿ

ಮಸ್ಕಿಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ತಹಸೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

e-ಸುದ್ದಿ, ಮಸ್ಕಿ

ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಗ್ಗೂಡಿ ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸಿ ಮಸ್ಕಿ ತಾಲೂಕನ್ನು ಕೋವಿಡ್ ಮುಕ್ತವನ್ನಾಗಿ ಮಾಡಬೇಕೆಂದು ಎಂದು ತಹಸೀಲ್ದಾರ ಬಲರಾಮ ಕಟ್ಟಿಮನಿ ಹೇಳಿದರು.
.ಮಸ್ಕಿ ಪಟ್ಟಣದ ಬ್ರಮರಾಂಬ ದೇವಸ್ಥಾನದ ಆವರಣದಲ್ಲಿ ಕೋವಿಡ್-೧೯ನಿಯಂತ್ರಣಕ್ಕಾಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ, ಗ್ರಾಪಂ ಅಧಿಕಾರಿಗಳ ಸಭೆಯಲ್ಲಿ ಸೂಚಿಸಿದರು.
ರಾಜ್ಯದಲ್ಲಿ ಕೋವಿಡ್ ಎರಡನೆಯ ಅಲೆ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ಈಗಾಗಲೇ ಗ್ರಾಪಂ ಮಟ್ಟದಲ್ಲಿ ಟಾಸ್ಕ್ ಪೋರ್ಸ ಸಮಿತಿಯನ್ನು ರಚನೆ ಮಾಡಲಾಗಿದೆ ಆದರೆ ಅಷ್ಟೋಂದು ಚುರುಕಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆದ್ದರಿಂದ ಇನ್ನುಮುಂದೆ ಟಾಸ್ಕ್ ಪೋರ್ಸ ಸಮಿತಿ ಅತ್ಯಂತ ಚುರುಕಿನಿಂದ ಕಾರ್ಯನಿರ್ವಹಣೆ ಮಾಡಿ ಗ್ರಾಮಗಳನ್ನು ಕೋವಿಡ್ ಮುಕ್ತವಾಗಿಸಬೇಕು. ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಜನರಿಗೆ ಜಾಗೃತಿ ಮೂಡಿಸುವುದು ಹಾಗೂ ಗ್ರಾಮಗಳಲ್ಲಿ ಕೋವಿಡ್ ಸೋಂಕಿತ ಸಂಶಯಾಸ್ಪದವಾಗಿ ಕಂಡು ಬಂದಲ್ಲಿ ಅಂತವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಿ ಸೊಂಕಿತರೆಂದು ದೃಡ ಪಟ್ಟರೆ ತಕ್ಷಣ ಅವರಿಗೆ ಕೋವಿಡ್ ಕೇಂದ್ರಗಳಿಗೆ ರವಾನಿಸಬೇಕು. ಆದ್ದರಿಂದ ಪ್ರತಿಯೊಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಗ್ರಾಮಗಳಲ್ಲಿ ಜನರಿಗೆ ತಿಳಿಸಬೇಕು ಎಂದು ಸೂಚಿಸಿದರು.

ಆಯಾ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಅತ್ಯಂತ ಹೆಚ್ಚಿನ ಮುತುವರ್ಜಿ ವಹಿಸಿ ಆಯಾ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದರ ಜೊತೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊರೋನ ವೈರಸ್ ನಿಯಂತ್ರಣಕ್ಕಾಗಿ ಗ್ರಾಮಗಳಲ್ಲಿ ಜನರಿಗೆ ಜಾಗೃತಿ ಮೂಡಿಸುವ ಜೊತೆಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಮಾಸ್ಕ್ ಹಾಗೂ ಸ್ಯಾನಿಟೈಜರ್‌ಗಳನ್ನು ಬಳಸುವಂತೆ ತಿಳಿಸಬೇಕು. ಸರ್ಕಾರ ಕೊರೋನಾ ತಡೆಗಟ್ಟಲು ಲಾಕ್‌ಡೌನ್ ಜಾರಿ ಮಾಡಿರುವುದರಿಂದ ಅನಗತ್ಯವಾಗಿ ಯಾರೂ ಕೂಡ ಮನೆ ಬಿಟ್ಟು ಹೊರಬರಬೇಡಿ ಒಂದುವೇಳೆ ಅನಾವಶ್ಯಕವಾಗಿ ಓಡಾಟ ನಡೆಸಿದರೆ ಅಂತರವರ ಮೇಲೆ ಎನ್‌ಡಿಎಂಎ ಕಾಯ್ದೆ ಅಡಿಯಲ್ಲಿಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗತ್ತದೆ. ಆದ್ದರಿಂದ ಆಯಾ ಗ್ರಾಮಗಳ ಹಿರಿಯರು ಅಲ್ಲಿನ ಜನರಿಗೆ ಅನಗತ್ಯವಾಗಿ ಓಡಾಟ ಮಾಡದಂತೆ ತಿಳಿಸಿ ಇದರಿಂದ ಕೊರೋನಾ ಆದಷ್ಟು ಬೇಗ ತಡೆಯಬಹುದು ಎಂದರು.,

ತಾ.ಪಂ ಇಒ ಬಾಬು ರಾಠೋಡ, ಡಾ.ಮಲ್ಲಿಕಾರ್ಜುನ ಇತ್ಲಿ, ಸಿಪಿಐ ದೀಪಕ‌ ಬೂಸರಡ್ಡಿ, ಹನುಮಂತಮ್ಮ ನಡಯಕ ಮಾತನಾಡಿದರು.

Don`t copy text!