ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ ಪೂರೈಸಲು ಪ್ರತಾಪಗೌಡ ಪಾಟೀಲ್ ಕೃಷಿ ಸಚಿವರಿಗೆ ಮನವಿ
e-ಸುದ್ದಿ, ಮಸ್ಕಿ
ಮಸ್ಕಿ.ತಾಲೂಕಿನಾದ್ಯಂತ ರೈತರು ಈಗಾಗಲೇ ಜಮೀನುಗಳನ್ನು ಹದ ಮಾಡಿಕೊಂಡು ಬಿತ್ತನೆಗಾಗಿ ಸಿದ್ಧತೆಯಲ್ಲಿ ಇರುವುದರಿಂದ ರೈತ ಸಂಪರ್ಕ ಕೇಂದ್ರಗಳಿಗೆ ರೈತರಿಗೆ ಬೇಕಾದ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಶನಿವಾರ ಪತ್ರ ಬರೆದು ಮನವಿ ಮಾಡಿದ್ದಾರೆ.
ಮಸ್ಕಿ ತಾಲೂಕಿನಲ್ಲಿ ರೈತರು ಮುಂಗಾರು ಬೆಳೆ ಬಿತ್ತನೆಗಾಗಿ ಹೊಲಗಳನ್ನು ಹದ ಮಾಡಿಕೊಂಡು ಬಿತ್ತನೆ ಬೀಜಗಳಿಗಾಗಿ ಪರದಾಡುತ್ತಿದ್ದಾರೆ. ತಾಲೂಕಿನ ಬಳಗಾನೂರು, ಮಸ್ಕಿ, ಗುಡದೂರು, ಪಾಮನಕಲ್ಲೂರು ಸೇರಿದಂತೆ ಯಾವುದೇ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳು ಪೂರೈಕೆಯಾಗದೆ ಇರುವುದರಿಂದ ಇಂಥ ಕಷ್ಟದ ಸಂದರ್ಭದಲ್ಲಿ ಕೊರೋನ ವೈರಸ್ ಹರಡುವ ಭೀತಿಯಿಂದ ರೈತರು ಮತ್ತಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಕಾಲದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಿ ರೈತರ ನೆರವಿಗೆ ಧಾವಿಸಬೇಕೆಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಕೃಷಿ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ