ಮಸ್ಕಿ: ಅಗತ್ಯ ವಸ್ತುಗಳ ಖರೀದಿಗೆ ಮುಗಿ ಬಿದ್ದ ಜನತೆ

ಪಾಲನೆಯಾಗದ ಕೊವಿಡ್ ನಿಯಮ
ಮಸ್ಕಿ: ಅಗತ್ಯ ವಸ್ತುಗಳ ಖರೀದಿಗೆ ಮುಗಿ ಬಿದ್ದ ಜನತೆ

e-ಸುದ್ದಿ,ಮಸ್ಕಿ

ಮಸ್ಕಿ : ಅಗತ್ಯ ವಸ್ತುಗಳ ಖರೀದಿಗಾಗಿ ಭಾನುವಾರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಜಿಲ್ಲಾಡಳಿತ ಲಾಕ್ ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಅಂತರ ಮರೆತ ಜನ ಖರೀದಿಗಾಗಿ ಅಂಗಡಿಗಳ ಮುಂದೆ ಮುಗಿ ಬಿದ್ದಿದ್ದ ದೃಶ್ಯ ಪಟ್ಟಣದಲ್ಲಿ ಕಂಡು ಬಂತು.
ತರಕಾರಿ, ದಿನಸಿ, ಹಾಲು, ಪೆಟ್ರೂಲ್ ಬಂಕ್ ಸೇರಿದಂತೆ ಅಗತ್ಯ ವಸ್ತುಗಳಿಗೆ ಮಾತ್ರ ವಿನಾಯ್ತಿ ನೀಡಲಾಗಿತ್ತು. ಆದರೆ, ಪಟ್ಟಣದಲ್ಲಿ ವಿನಾಯ್ತಿ ವಸ್ತುಗಳ ಹೊರತುಪಡಿಸಿ ಬೇಕರಿ, ಬಟ್ಟೆ ಅಂಗಡಿ, ಅಟೋ ಮೊಬೈಲ್ ಶಾಪ್ ಸೇರಿದಂತೆ ಬಹುತೇಕ ಅಂಗಡಿಗಳು ಅಲ್ಲಲ್ಲಿ ತೆರದಿದ್ದರಿಂದ ತಮಗೆ ಬೇಕಾದ ವಸ್ತುಗಳ ಖರೀದಿಗಾಗಿ ಹೆಚ್ಚಿನ ಜನ ಸೇರದ್ದ ದೃಶ್ಯ ಸಾಮಾನ್ಯವಾಗಿತ್ತು.
ಬೆಳಿಗ್ಗೆಯೇ ಸರ್ಕಲ್ ಇನ್ ಸ್ಪೆಕ್ಟರ್ ದೀಪಕ್ ಬಿ. ಬೂಸರೆಡ್ಡಿ, ಸಬ್ ಇನ್ ಸ್ಪೆಕ್ಟರ್ ಸಿದ್ದರಾಮ ನೇತೃತ್ವದಲ್ಲಿ ಪೊಲೀಸರು ಹಾಗೂ ಪುರಸಭೆ ಸಿಬ್ಬಂದಿ ಗುಂಪು ಗುಂಪಾಗಿ ಸೇರಿದ್ದ ಜನರನ್ನು ಚದುರಿಸಿದರು. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಹಳೆ ಬಸ್ ನಿಲ್ದಾಣ, ಅಶೋಕ ವೃತ್ತ, ಕನಕವೃತ್ತ, ಮುಖ್ಯ ಬಜಾರ ಸೇರಿದಂತೆ ಪ್ರಮುಖ ರಸ್ತೆಗಳು ಜನ ಜಂಗುಳಿಯಿಂದ ತುಂಬಿ ತುಳಕಿದ್ದವು.  ಬೈಕ್ ಸೇರಿದಂತೆ ವಾಹನ ಸಂಚಾರ ಹೆಚ್ಚಾಗಿದ್ದರಿಂದ ಕೆಲವೊಂದು ರಸ್ತೆಗಳಲ್ಲಿ ಟ್ರಾಪಿಕ್ ಜಾಮ್ ಕಂಡು ಬಂತು.
ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು ಸಾರ್ವಜನಿಕರು ಕೊರೊನಾ ನಿಯಮ ಪಾಲನೆ ಮಾಡದೆ ಖರೀದಿಯಲ್ಲಿ ಪಾಲ್ಗೊಳ್ಳುತ್ತಿರುವುದು ಆತಂಕ ಸೃಷ್ಠಿಸಿದೆ.

_————————————————-

ತಾಲ್ಲೂಕಿನಲ್ಲಿ ಭಾನುವಾರ 74 ಜನಕ್ಕೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮ ನಿ ತಿಳಿಸಿದ್ದಾರೆ.
ಸೋಂಕಿತರನ್ನು ಮನವೋಲಿಸಿ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಆರಂಭಿಸಲಾಗಿರುವ ಕೊವಿಡ್ ಆರೈಕೆ ಕೇಂದ್ರಕ್ಕೆ ತರುವಂತೆ ಆಯಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

———————————————

ಮದುವೆ ಸಮಾರಂಭಗಳಿಗಿಲ್ಲ ಕೊವಿಡ್ ನಿಯಮ..!

ಮಸ್ಕಿ : ತಾಲ್ಲೂಕಿನಲ್ಲಿ ನಡೆಯುವ ಮದುವೆ ಸಮಾರಂಭಗಳು ಕೊವಿಡ್ ನಿಯಮ ಮೀರಿ ನಡೆಯುತ್ತಿರುವುದು ಬೆಳಕಿಗೆ ಬಂದಿವೆ. ಹೆಚ್ಚುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಮದುವೆ ಸಮಾರಂಭಗಳಿಗೆ ನಿಯಮ ಜಾರಿ ಗೊಳಿಸಿದೆ.
ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ತಾಲ್ಲೂಕು ಆಡಳಿತದ ಅನುಮತಿ ಪಡೆಯದೆ ಮದುವೆ ಸಮಾರಂಭಗಳು ನಡೆಯುತ್ತಿದ್ದು ನೂರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.
ಮದುವೆ ಸಮಾರಂಭಗಳಲ್ಲಿ ಮಾಸ್ಕ್ ಬಳಕೆ, ಸಾನಿಟೈಸರ್, ಅಂತರ್ ಸೇರಿದಂತೆ ಕೊವಿಡ್ ನಿಯಮಗಳ ಪಾಲನೆಯಾಗದೆ ಇರುವುದು ತಾಲ್ಲೂಕು ಆಡಳಿತದ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದರು.

Don`t copy text!