e-ಸುದ್ದಿ ಮಸ್ಕಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಶಾಸಕ ಬಸನಗೌಡ ತುರ್ವಿಹಾಳ ಶನಿವಾರ ಪಟ್ಟಣದ ವಿವಿಧ ಪೆಟ್ರೂಲ್ ಪಂಪ್ ಮುಂದೆ ಪ್ರತಿಭಟನೆ ನಡೆಸಿದರು.
ಶಾಸಕ ಬಸನಗೌಡ ತುರ್ವಿಹಾಳ ಮಾತನಾಡಿ ಪ್ರಧಾನಿ ಮೋದಿಗೆ ಬಡ ಜನರ ಕಷ್ಟ ಗೊತ್ತಿಲ್ಲ. ಕಾರ್ಪೋರೇಟ್ ವಲಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದ್ದಾರೆ ಎಂದು ಖಂಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಮಾತನಾಡಿ ಕೇಂದ್ರ ಸರ್ಕಾರ ಕೂಡಲೇ ತೈಲ್ ಬೆಲೆ ಇಳಿಸಿ ಜನ ಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಯುಥ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಕೆಲವರು ಗೈರು ಃ ಕಾಂಗ್ರೆಸ್ ಪಕ್ಷ ಶನಿವಾರ ಹಮ್ಮಿಕೊಂಡಿದ್ದ ಪ್ರತೀಭಟನೆ ಕಾರ್ಯಕ್ರಮಕ್ಕೆ ಕೆಲ ಪ್ರಮುಖ ಕಾರ್ಯಕರ್ತರು ಭಾಗವಹಿಸದೆ ಗೈರು ಹಾಜರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಅಸಮಾದಾನದ ಹೊಗೆ ಯಾಡತೊಡಗಿದೆ ಎಂಬ ಮಾತುಗಳಿಗೆ ಹಿರಿಯ ಮುಖಂಡರು ಗೈರು ಹಾಗಿರುವದು ಎದ್ದು ಕಾಣುತ್ತಿತ್ತು.