ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
e-ಸುದ್ದಿ, ಇಳಕಲ್ಲ
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಇಂದು ಬಲಕುಂದಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಹಿರೇಉಪನಾಳ ಕ್ರಾಸ್ ನಲ್ಲಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿಸದರು.
ಮಾಜಿ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಪೆಟ್ರೋಲ್ ಹಾಕಿಸಲು ಬಂದ ಗ್ರಾಹಕರಿಗೆ ಸಿಹಿ ಹಂಚುವ ಮೂಲಕ ದರ ಏರಿಕೆ ಬಗ್ಗೆ ಸಾರ್ವಜನಿಕರ ಅನಿಸಿಕೆಗಳನ್ನು ಪಡೆದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.