ಸಿಎಂ ನಿರ್ಧಾರ ಸೂಕ್ತ: ಪ್ರತಾಪಗೌಡ
e-ಸುದ್ದಿ ಮಸ್ಕಿ
ಕರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿರುವುದು ಸೂಕ್ತವಾಗಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲರ ತಿಳಿಸಿದ್ದಾರೆ.
ಕೋವಿಡ್ ಎರಡನೇ ಅಲೆಯಲ್ಲಿ ಬಡ ಕುಟುಂಬಗಳು ದುಡಿಮೆ ಇಲ್ಲದೆ ಸಂಕಷ್ಟ ಅನುಭವಿಸಿವೆ, ಅದರಲ್ಲಿ ಕೊರೊನಾದಿಂದ ಮೃತಪಟ್ಟ ಬಹುತೇಕ ಬಡ ಕುಟುಂಬಗಳು ಕತ್ತಲಿನಲ್ಲಿ ಬದುಕಿನ ಬಂಡಿ ದುಡುತ್ತಿದ್ದಾರೆ. ಹೀಗಾಗಿ ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1ಲಕ್ಷ ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.