e-ಸುದ್ದಿ ಮಸ್ಕಿ
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಮತ್ತು ಆಹಾರ ಭದ್ರತೆ ಯೋಜನೆ ಅನುಷ್ಠಾನ ಯೋಜನೆಯ ಆಹಾರ ಪದಾರ್ಥಗಳು ಜಿಲ್ಲೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಅಂತವರ ವಿರುದ್ದ ಕಠಿಣ ಕ್ರಮ ಜರುಗಿಸಬೇಕೆಂದು ಕರ್ನಾಟಕ ರೈತ ಸಂಘದ ತಾಲೂಕು ಅಧ್ಯಕ್ಷ ಸಂತೋಷ ಹಿರೇದಿನ್ನಿ ಒತ್ತಾಯಿಸಿದ್ದಾರೆ.
ಈ ಕುರಿತು ಗುರುವಾರ ತಹಸಿಲ್ದಾರ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಕುರಿತು ಈಗಾಗಲೇ ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿದ್ದರು ಅಕ್ರಮ ಮಾರಾಟ ಅವ್ಯಹತವಾಗಿ ನಡೆದಿದೆ ಎಂದು ದೂರಿದ್ದಾರೆ.
ಕೇಂದ್ರ ಸರ್ಕಾರ ಧೀಡಿರನೇ ರಸಗೊಬ್ಬರ ದರ ಏರಿಕೆ ಮಾಡಿದ್ದು ಸರಿಯಾದ ಕ್ರಮವಲ್ಲ. ಡಿಸೇಲ್, ಪೆಟ್ರೂಲ್ ಮತ್ತು ರಸಗೊಬ್ಬರಗಳ ಬೆಲೆ ಹೆಚ್ಚಳದಿಂದಾಗಿ ರೈತರಿಗೆ ತೊಂದರೆಯಾಗಿದೆ. ಕೂಡಲೇ ಸರ್ಕಾರ ರಸಗೊಬ್ಬರಗಳ ಮೇಲಿನ ದರ ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.
ಕೆಆರ್ ಎಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಮಾರುತಿ ಜಿನ್ನಾಪುರ, ಛತ್ರಗೌಡ ಘಂಟೇರ ಹಟ್ಟಿ, ಶರಣಪ್ಪಗೌಡ ಚಿಲ್ಕಾರಾಗಿ, ಹುಲುಗಪ್ಪ, ತಿರುಪತಿ ಮಸ್ಕಿ, ವಿರುಪಣ್ಣ, ಯಮನಪ್ಪ, ದ್ಯಾಮಣ್ಣ, ಯಲ್ಲಪ್ಪ ಹಾಗೂ ಇತರರು ಭಾಗವಹಿಸಿದ್ದರು.