e-ಸುದ್ದಿ, ಮಸ್ಕಿ
ಕೋವಿಡ್ ವೈರಸ್ ಎನ್ನುವ ಸಾಂಕ್ರಾಮಿಕ ಸಂದರ್ಭದಲ್ಲಿ ಅಸುನೀಗಿದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಕಷ್ಟದಲ್ಲಿ ಸಮಯದಲ್ಲಿ ಆರ್ಥಿಕ ನೆರವು ನೀಡಿ ನೈತಿನ ಸ್ಥೈರ್ಯ ತಂಬಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಜಿಲ್ಲಾ ಎಸ್ಸಿ ಮೋರ್ಚಾದ ವತಿಯಿಂದ ಕೃತಜ್ಞತೆ ತಿಳಿಸುವುದಾಗಿ ರಾಯಚೂರು ಜಿಲ್ಲಾ ಎಸ್ಸಿ ಮೊರ್ಚಾ ಅಧ್ಯಕ್ಷ ಶರಣಬಸವ ಉಮಲೂಟಿ ವಕೀಲರು ತಿಳಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಕುಂಟುಂಬದ ಯಜಮಾನ ಮರಣ ಹೊಂದಿ ಅನೇಕ ಕುಟುಂಬಗಳು ಬೀದಿ ಪಾಲಾಗಿ ತೊಂದರೆಯಲ್ಲಿ ಸಿಲುಕಿವೆ. ಅಂತಹ ಕುಟುಂಬಗಳು ಸಂಕಷ್ಟಕ್ಕೆ ಸಿಕಲುಕಬಾರದು ಎನ್ನುವ ಹಿತದೃಷ್ಟಿಯಿಂದ ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯಾದ್ಯಕ್ಷ ಚೆಲುವಾದಿ ನಾರಾಯಣಸ್ವಾಮಿ ಅವರ ಮನವಿ ಮೇರೆಗೆ ರಾಜ್ಯ ಸರ್ಕಾರ ಕೋವಿಡ್‍ನಿಂದ ಮೃತ ಪಟ್ಟ ಕುಟುಂಬಕ್ಕೆ ನೇರವಾಗಿ ವಿಷೇಶ ಸಹಾಯವನ್ನು ಘೋಷಿಸಿದೆ.
ರಾಷ್ಟ್ರೀಯ ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮದಿಂದ 5 ಲಕ್ಷಗಳ ವರೆಗೆ ನಿಗಮದಿಂದಲೇ ನೇರವಾಗಿ ಸಾಲ ಹಾಗೂ ಸಹಾಯ ಧನವನ್ನು ಮಂಜೂರು ಮಾಡುವ ವಿಶೇಷ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ ಇದರಿಂದ ಕೋವಿಡ್ ಸಂಕಷ್ಟದಲ್ಲಿ ಸಮಯದಲ್ಲಿ ಎಸ್ಸಿ ಸಮುದಾಯಕ್ಕೆ ಆರ್ಥಿಕವಾಗಿ ಅನುಕೂಲವಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.