ಸೈಯದ್ ಯೂನಸ್ ಆತ್ಮಹತ್ಯೆಗೆ ಯತ್ನಿಸಿದ ಚಾಲಕ

 

ಸೈಯದ್ ಯೂನಸ್ ಆತ್ಮಹತ್ಯೆಗೆ ಯತ್ನಿಸಿದ ಚಾಲಕ.  

e-ಸುದ್ದಿ   ರಾಯಚೂರು 

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸಿದ್ದ ಹಿನ್ನೆಲೆ ಸಾರಿಗೆ ಇಲಾಖೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಎನ್​​ಇಕೆಆರ್​​ಟಿಸಿ ಡಿವಿಷನಲ್ ಕಚೇರಿ ಎದುರು ನಡೆದಿದೆ.

ಸೈಯದ್ ಯೂನಸ್ ಆತ್ಮಹತ್ಯೆಗೆ ಯತ್ನಿಸಿದ ಚಾಲಕ. ಮುಷ್ಕರದಲ್ಲಿ‌ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸೈಯದ್ ವಿಷ ಸೇವಿಸಲು ಮುಂದಾಗಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಿಬ್ಬಂದಿ ಅವರ ಬಳಿ ಇದ್ದ ಕ್ರಿಮಿನಾಶಕವನ್ನು ಕಿತ್ತೆಸೆದು ಆತ್ಮಹತ್ಯೆ ತಡೆದಿದ್ದಾರೆ.

ಸೈಯದ್ ಅವರನ್ನು ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ., ವರ್ಗಾವಣೆ ವಿಚಾರಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸರ್ಕಾರದ ವಿರುದ್ಧ ಧ್ವನಿ ಎತ್ತಿದವರಿಗೆ ವರ್ಗಾವಣೆ ಶಿಕ್ಷೆ ನೀಡಲಾಗುತ್ತಿದೆ. ವರ್ಗಾವಣೆ, ವೇತನ ತಡೆ ಸೇರಿದಂತೆ ಮೇಲಾಧಿಕಾರಿಗಳು ವಿವಿಧ ರೂಪದಲ್ಲಿ ಕಿರುಕುಳ ನೀಡುತ್ತಿದ್ದಾರೆ. ಮೂರು ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿದ್ದಾರೆ.

Don`t copy text!