ಗೌಡೂರು ಗ್ರಾಮಕ್ಕೆ ಜಿಲ್ಲಾ ಪಂಚಾಯತ್ .ಸಿ.ಇ.ಒ ಭೇಟಿ

 

ಗೌಡೂರು ಗ್ರಾಮಕ್ಕೆ ಜಿಲ್ಲಾ ಪಂಚಾಯತ್ .ಸಿ.ಇ.ಒ ಭೇಟಿ 

e-ಸುದ್ದಿ, ಲಿಂಗಸುಗೂರು

ಲಿಂಗಸೂಗುರು ತಾಲೂಕಿನ ಗೌಡೂರು ಗ್ರಾಮ ಪಂಚಾಯಿತಿಗೆ ರಾಯಚೂರು ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶೆಖ್ ತನ್ವಿರ್ ಆಸಿಫ್ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 60 ಲಕ್ಷ ರೂ ಅನುದಾನದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯಿತಿ ಹತ್ತಿರ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಕುಡಿಯುವ ನೀರಿನ ಮೆಲ್ತೊಟ್ಟಿ ಹಾಗೂ ಮನೆ ಮನೆಗೆ ನೀರು ಸರಬರಾಜು ಮಾಡುವ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗಳನ್ನು ಪರಿಶೀಲಿಸಿದರು.

ನಂತರ ಮಾಚನೂರು ಗ್ರಾಮಕ್ಕೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಬಿಸಿ ಊಟದ ಕೋಣೆ,ಮಳೆ ನೀರು ಕೊಯ್ಲು, ಶಾಲಾ ಕಾಂಪೌಂಡ್ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.ಬಾಕಿ ಉಳಿದ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣ ಗೊಳಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು

.ಈ ಸಂದರ್ಭದಲ್ಲಿ ಲಿಂಗಸೂಗೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮಿದೇವಿ,ಎ.ಇ.ಇ ಶಿವಕುಮಾರ್ ಜೆ.ಇ ರಮೇಶ ಗ್ರಾಮ ಪಂಚಾಯಿತಿ ಪಿ.ಡಿ.ಒ ಮಹಮ್ಮದ್ ಇಸಾಕ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

Don`t copy text!