e-ಸುದ್ದಿ, ಮಸ್ಕಿ
ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಡೀಸೆಲ್, ಪೆಟ್ರೋಲ್, ಅಡಿಗೆ ಇಂಧನ ಸೇರಿದಂತೆ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ ಗುರುವಾರ ಮಸ್ಕಿಯಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.
ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಗಂಗಾವತಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಕಾಂಗ್ರೆಸ್ನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಿ.ನಾಯಕ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಹಾಕುವ ಮೂಲಕ ಬೆಲೆ ಏರಿಕೆ ನೀತಿಯನ್ನು ಖಂಡಿಸಿದರು.
ಬಸವೇಶ್ವರ ವೃತ್ತದಿಂದ ಆರಂಭವಾದ ಜಾಥಾ ವಾಲ್ಮೀಕಿ ವೃತ್ತ, ಕನಕವೃತ್ತ, ಮುಖ್ಯ ಬಜಾರ. ಅಶೋಕ ವೃತ್ತ, ಹಳೆಯ ಬಸ್ ನಿಲ್ದಾಣದ ಮೂಲಕ ಬಸವೇಶ್ವರ ನಗರದಲ್ಲಿನ ಕಾಂಗ್ರೆಸ್ ಕಚೇರಿಗೆ ಆಗಮಿಸಿತು.
ಈ ಸಂದರ್ಭದಲ್ಲಿ ಶಾಸಕರಾದ ಆರ್. ಬಸನಗೌಡ ತುರ್ವಿಹಾಳ ಮಾತನಾಡಿ ಬಿಜೆಪಿ ನೇತೃತ್ವದ ಸರ್ಕಾರ ದಲ್ಲಾಳಿಗಳ ಪರವಾಗಿದೆ ಎಂದು ಆರೋಪಿಸಿ ಕೂಡಲೇ ಬೇಲೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು. ಶಾಸಕ ದದ್ದಲ್ ಬಸನಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ. ಎಚ್. ಬಿ. ಮುರಾರಿ, ಸಿದ್ದಣ್ಣ ಹೂವಿನಭಾವಿ. ಆರ್.ಸಿದ್ದನಗೌಡ, ಕೆಪಿಸಿಸಿ ಹಿಂದುಳಿದ ವರ್ಗದ ಕಾರ್ಯದರ್ಶಿ ಆನಂದ ಕುಮಾರ, ಬಸನಗೌಡ ಮುದಬಾಳ, ಮಹಿಬೂ¨ಸಾಬ್ ಮುದ್ಧಾಪೂರು, ಶರಣಪ್ಪ ಎಲಿಗಾರ, ಅಶೋಕ ಮುರಾರಿ ಸೇರಿದಂತೆ ಅನೇಕ ಮುಖಂಡರು ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು.