ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ

e-ಸುದ್ದಿ, ಮಸ್ಕಿ

ಮಸ್ಕಿಯ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ  ಮಾಜಿ ಶಾಸಕರಾದ  ಶ್ರೀ ಪ್ರತಾಪ್ ಗೌಡ ಪಾಟೀಲ್ ಪದಾಧಿಕಾರಿಗಳ ಕುರಿತು ಮಾತನಾಡಿದರು.

ಚುನಾವಣೆ ಮುಗಿದ ನಂತರ ಮೊದಲ ಸಭೆಯಲ್ಲಿ ಮಂಡಲ ಪದಾಧಿಕಾರಿಗಳು ಮತ್ತು ಮೋರ್ಚಾ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮತ್ತು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರು ಕಾರ್ಯದರ್ಶಿಗಳು ಪದಾಧಿಕಾರಿಗಳ ಸಭೆಯನ್ನು ನಡೆಸಿದರು. ಬಿಜೆಪಿ ಮಂಡಲ ಅಧ್ಯಕ್ಷರಾದ ಶಿವಪುತ್ರಪ್ಪ ಹರಳಹಳ್ಳಿ ಹಾಗೂ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿ ಗೌಡ ಪಾಟೀಲ್ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ ಬಿಜೆಪಿ ಹಿರಿಯ ಮುಖಂಡರಾದ ಮಹಾದೇವಪ್ಪಗೌಡ ಪೊಲೀಸ್ ಪಾಾಟೀಲ ಹಾಗೂ ಮಲ್ಲಪ್ಪ ಅಂಕುಶದೊಡ್ಡಿ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷರಾದ ಶರಣಬಸವ ವಕೀಲ್ ಉಮಲೂಟಿ ಮಂಡಲ ಪ್ರಧಾನಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ ಮಲ್ಲೇಶ್ ಯಾದವ್ ಹಾಗೂ ಅಭಿಜಿತ್ ಮಾಲಿಪಾಟೀಲ್ ಇದ್ದರು.

Don`t copy text!