ಸರ್ಕಾರದ ಯೋಜನೆ ಸದ್ಬಳಕೆ ಮಾಡಿಕೊಳ್ಳಿ-ಲೀಲಾ ಕಾರಟಗಿ

ಸರ್ಕಾರದ ಯೋಜನೆ ಸದ್ಬಳಕೆ ಮಾಡಿಕೊಳ್ಳಿ-ಲೀಲಾ ಕಾರಟಗಿ

e- ಸುದ್ದಿ ಮಸ್ಕಿ

ಸರ್ಕಾರದಿಂದ ಬರುವ ಯಾವುದೇ ಯೋಜನೆಗಳಿರಲಿ ನಾವು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಯೋಜನೆಯ ಉದ್ದೇಶ ಸಾರ್ಥಕವಾಗುತ್ತದೆ ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ನಿರ್ದೇಶಕಿ ಲೀಲಾ ಮಲ್ಲಿಕಾರ್ಜುನ ಕಾರಟಗಿ ಹೇಳಿದರು.
ತಾಲೂಕಿನ ಗೌಡನಭಾವಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ೨೨ ಲಕ್ಷ ವೆಚ್ಚದ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು.
ಹಿಂದುಳಿದ ಪ್ರದೇಶದ ಈ ಭಾಗಧ ಅಭಿವೃದ್ಧಿಗಾಗಿ ಸರ್ಕಾರ ಕಲ್ಯಾಣ ಕರ್ನಾಟಕವೆಂದು ಘೋಷಣೆ ಮಾಡಿ ನಮ್ಮ ಭಾಗದ ಅಭಿವೃದ್ಧಿಗಾಗಿ ೫೦೦ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಮಾಜಿ ಸಂಸದ ಡಾ. ಬಸವರಾಜ ಪಾಟೀಲ್ ಸೇಡಂ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಸಂಘದ ಮೂಲಕ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಈಗಾಗಲೆ ಕಲ್ಯಾಣ ಕರ್ನಾಟಕ ಸಂಘದಿಂದ ಪಶು, ಮೇಕೆ, ಗೋಕೃಪಾಂವೃತ ಯೋಜನೆಗಳು ಜಾರಿಗೆ ಬಂದಿವೆ. ಮಹಿಳೆಯರಿಗಾಗಿ ಹೊಲಿಗೆ ತರಬೇತಿ ಕೇಂದ್ರ ಹಾಗೂ ಪ್ರತಿಭಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಜಿಲ್ಲಾ ಪ್ರತಿನಿಧಿ ಅಮರೇಶ ಹರಸೂರು, ತಾಲೂಕು ಸಂಚಾಲಕ ಸಾಧಿಕ ಸೇರಿದಂತೆ ಇನ್ನತರರು ಇದ್ದರು. ಗುರು ಬಸವೇಶ್ವರ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಯು.ಹನುಮಂತಪ್ಪ, ಕಾರ್ಯದರ್ಶಿ ಯಂಕಪ್ಪ ಕುರಿ, ಅಮರೇಶಪ್ಪ ಕುರಡಿ ಸೇರಿದಂತೆ ಇನ್ನಿತರರು ಇದ್ದರು

Don`t copy text!