ಲಯನ್ಸ್ ಸಂಸ್ಥೆಯ ಸಾಮಾಜಿಕ ಕಳಕಳಿ ಶ್ಲಾಘನೀಯ: ಶಾಸಕ ಬಸನಗೌಡ ತುರ್ವಿಹಾಳ


e-ಸುದ್ದಿ, ಮಸ್ಕಿ
ಲಯನ್ಸ್ ಸಂಸ್ಥೆಯ ಕಳೆದ 40 ವರ್ಷಗಳಿಂದ ಸಾಮಾಜಿಕ ಕಳಕಳಿಯಿಂದ ಸೇವಾ ಕಾರ್ಯಗಳನ್ನು ಮಾಡುತ್ತಿರುವದು ಶ್ಲಾಘನೀಯವಾಗಿದೆ ಎಂದು ಶಾಸಕ ಬಸನಗೌಡ ತುರ್ವಿಹಾಳ ಹೇಳಿದರು.
ಪಟ್ಟಣದÀ ಭ್ರಮರಾಂಬ ದೇವಸ್ಥಾನದ ಸಮುದಾಯ ಭವನದಲ್ಲಿ ಲಯನ್ಸ್ ಸಂಸ್ಥೆಯಿಂದ ಭಾನುವಾರ ಆಯೋಜಿಸಿದ್ದ 2021-2022 ನೇ ಸಾಲಿನ ಪದಾಧಿಕಾರಿಗಳ ಪದವಿ ಫ್ರಧಾನ ಹಾಗೂ ಕೆನರಾ ಬ್ಯಾಂಕ್ ಅಧಿಕಾರಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಕ್ಷಣ, ಆರೋಗ್ಯ, ಪರಿಸರ ರಕ್ಷಣೆಗೆ ಸಂಬಂಧಿಸಿದ ಹಲವಾರು ಸಾಮಾಜಿಕ ಕೆಲಸಗಳಲ್ಲಿ ಸಂಸ್ಥೆ ತನ್ನ ಸೇವಾ ಕಾರ್ಯದ ಮೂಲಕ ಸಾಮಾಜಿಕ ಕಳಕಳಿಯನ್ನು ಮೆರೆದಿರುವದಕ್ಕೆ ಶಾಸಕರು ಅಭಿನಂದನೆ ಸಲ್ಲಿಸಿದರು.
ಲಯನ್ ಎಂಎಸ್‍ಎಫ್ ಗುರುರಾಜ ಬಹದ್ದೂರ ಪಿಡಿಜಿ ನೂತನ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಯ ಸದಸ್ಯರಿಗೆ ಪದವಿ ಪ್ರದಾನ ಹಾಗೂ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಲಯನ್ ಸಂಸ್ಥೆಯ ಹಿರಿಯ ಸದಸ್ಯ ಡಾ.ಶಿವಶರಣಪ್ಪ ಇತ್ಲಿ ಮಾತನಾಡಿ ಕಳೆದ 40 ವರ್ಷಗಳಿಂದ ಮಾಡಿದ ಸಾಧನೆಗಳನ್ನು ಸ್ಮರಿಸಕೊಂಡರು.
ಲಯನ್ಸ್ ಸಂಸ್ಥೆಯ ಹಿರಿಯ ಸದಸ್ಯ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿದರು.
ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಿ.ಶಿವಾ, ನೂತನ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ ಮಾತನಾಡಿದರು. ಲಯನ್ಸ್ ಸಂಸ್ಥೆಯ ಲಯನ್ ಕೆ.ಶ್ರೀನಿವಾಸ ಗುಪ್ತಾ, ಡಾ.ಬಿ.ಎಚ್.ದಿವಟರ್, ನಿಕಟ ಪೂರ್ವ ಅಧ್ಯಕ್ಷ ಉಮಾಕಾಂತಪ್ಪ ಸಂಗನಾಳ, ಮಲ್ಲಿಕಾರ್ಜುನ ಶೆಟ್ಟಿ, ಕೋಶಾಧಿಕಾರಿ ಬಸಲಿಂಗಪ್ಪ ಶೆಟ್ಟಿ, ಮುಂತಾದವರು ಭಾಗವಹಿಸಿದ್ದರು.

Don`t copy text!