ಬಿಎಸ್ ಯಡಿಯೂರಪ್ಪ ರಾಜೀನಾಮೆಗೆ ವಿರೋಧ
e-ಸುದ್ದಿ, ಗಂಗಾವತಿ
ಹೋರಾಟದ ಹಾದಿ ಮೂಲಕ ಬಿಜೆಪಿಯನ್ನು ಕಟ್ಟಿ ಬೆಳಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದು ಅತ್ಯಂತ ಖಂಡನೀಯ ಎಂದು ಬಸನಗೌಡ ಕಕ್ಕರಗೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಅಂದ್ರೇನೆ ಬಿ.ಎಸ್.ಯಡಿಯೂರಪ್ಪ. ಯಡಿಯೂರಪ್ಪ ಅಂದ್ರೇನೆ ಬಿಜೆಪಿ. ಆದರೆ ಅಂತಹವರನ್ನೇ ಅಧಿಕಾರದಿಂದ ಕೆಳಗೆ ಇಳಿಸಿದ್ದು ಸರಿಯಲ್ಲ. ಇದು ಒಂದು ರಾಜಕೀಯ ಪಕ್ಷವನ್ನು ಕಟ್ಟಿ ಬೆಳೆಸಿದ ವ್ಯಕ್ತಿಯನ್ನು ಅವಮಾನಿಸಿದಂತಾಗಿದೆ. ರಾಜ್ಯದ ಪ್ರತಿ ಬಿಜೆಪಿ ಕಾರ್ಯಕರ್ತನಿಗೂ ಅಪಮಾನ ಮಾಡಿದಂತಾಗಿದೆ. ಇದು ಬಿಜೆಪಿ ಪಾಲಿಗೆ ಅತ್ಯಂತ ಕಹಿ ದಿನವಾಗಿದೆ. ಈ ಹಿಂದೆ ಬಿಜೆಪಿಯಿಂದ ಹೊರ ಹೋಗಿದ್ದ ಬಿ.ಎಸ್.ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದ್ದಾಗ ಬಿಜೆಪಿ ಅನುಭವಿಸಿದ್ದ ಕಷ್ಟದ ಪರಿಸ್ಥಿತಿಯನ್ನು ಮತ್ತೊಮ್ಮೆ ಎದುರಿಸಬೇಕಾಗುತ್ತದೆ. ರಾಜ್ಯದ ಭಾವನೆಗಳನ್ನು ಕೆರಳಿಸಿದ ಈ ನಿರ್ಧಾರ ಸರಿಯಲ್ಲ. ಬಿಜೆಪಿ ವರಿಷ್ಠರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದು ಬಸನಗೌಡ ಕಕ್ಕರಗೋಳ ಆಗ್ರಹಿಸಿದ್ದಾರೆ.