ಸಾಂಸ್ಕ್ರತಿಕ ಭವನ ಕಟ್ಟಡ ಕಾಮಗಾರಿಗೆ ಚಾಲನೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇಡಂ ಅವರ ಸೇವೆ ಅಪಾರ – ಶಾಸಕ ಆರ್. ಬಸನಗೌಡ

ಸಾಂಸ್ಕ್ರತಿಕ ಭವನ ಕಟ್ಟಡ ಕಾಮಗಾರಿಗೆ ಚಾಲನೆ
ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇಡಂ ಅವರ ಸೇವೆ ಅಪಾರ – ಶಾಸಕ ಆರ್. ಬಸನಗೌಡ

e- ಸುದ್ದಿ ಮಸ್ಕಿ:

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಸವರಾಜ ಪಾಟೀಲ್ ಸೇಡಂ ಅವರ ಸೇವೆ ಅಪಾರವಾಗಿದೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಪಟ್ಟಣದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ ನಿರ್ಮಿಸಲಾಗುತ್ತಿರುವ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಚಾಲ‌ನೆ ನೀಡಿ ಮಾತನಾಡಿ ‘ ಕಲ್ಯಾಣ‌ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ವತಿಯಿಂದ ಸಾಂಸ್ಕೃತಿಕ ಕಟ್ಟಡ ನಿರ್ಮಾಣಕ್ಕೆ ₹ 25 ಲಕ್ಷ ಅನುದಾನ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಇಂತಹ ಕೆಲಸಗಳನ್ನು ಕೈಗೊಳ್ಳಲಾಗುತ್ತಿರುವುದು ಶ್ಲಾಘನೀಯ. ಪಠ್ಯದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುವುದು ಅಗತ್ಯ. ಆ ನಿಟ್ಟಿನಲ್ಲಿ ಇಂತಹ ಕಟ್ಟಗಳು ಸದ್ಬಳಕೆಯಾಗಬೇಕು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಮತ್ತು ಸಾಂಸ್ಕೃತಿಕ ಸಂಘದ ಸಮಿತಿಯ ಪ್ರಮುಖರಾದ ಲೀಲಾ ಮಲ್ಲಿಕಾರ್ಜುನ ಕಾರಟಗಿ, ಈರೇಶ ಇಲ್ಲೂರು, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದಯಾನಂದ ಜೊಗಿನ್, ಉಪಾಧ್ಯಕ್ಷ ಶಿವಕುಮಾರ ಎನ್. ಕಾರ್ಯದರ್ಶಿ ವೀರೇಶ ಸೌದ್ರಿ,‌ ಆಡಳಿತ ಮಂಡಳಿ ಸದಸ್ಯರಾದ ಮಹಾಂತೇಶ ಮಸ್ಕಿ, ಪ್ರಕಾಶ ಮಸ್ಕಿ, ಮಲ್ಲಿಕಾರ್ಜುನ ಹಳ್ಳಿ, ಭರತ ದೇಶಮುಖ, ಪಾರ್ಶ್ವನಾಥ ಕೋಲ್ಹಾರ, ಚಿದಾನಂದ್ ಎಚ್. ಸೋಮಶೇಖರ ಸಜ್ಜನ್, ಮಾನವ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಅಮರೇಶ, ಸಿದ್ದಾರೆಡ್ಡಿ ಗಿಣಿಚಾರ ಸೇರಿ ಇತರರು ಇದ್ದರು.
ಇದೇ ಸಂದರ್ಭದಲ್ಲಿ ರೈತರಿಗೆ ಸಂಸ್ಥೆಯಿಂದ ಸಸಿಗಳನ್ನು ವಿತರಿಸಲಾಯಿತು.

Don`t copy text!