ಕ್ರೀಡಾಂಗಣ ನಿರ್ಮಾಣಕ್ಕೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಮನವಿ
e- ಸುದ್ದಿ, ಮಸ್ಕಿ
ಮಸ್ಕಿ ಪಟ್ಟಣ ತಾಲೂಕು ಕೇಂದ್ರ ವಾಗಿದ್ದು ತಾಲೂಕು ಮಟ್ಟದ ಕ್ರೀಡಾಂಗಣ ನಿರ್ಮಿಸುವಂತೆ ಮಸ್ಕಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಒತ್ತಾಯಿಸಿ ತಹಸೀಲ್ದಾರ ಕವಿತಾ ಆರ್ ಅವರಿಗೆ ಮಂಗಳವಾರ ಮನವಿ ಸಲ್ಲಿದರು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ಪ ಹಸಮಕಲ್ ಮಾತನಾಡಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಸಲುವಾಗಿ ತಾಲೂಕಿನಲ್ಲಿ ಕ್ರೀಡಾಂಗಣ ಅವಶ್ಯಕತೆ ಇದೆ ಕ್ರೀಡಾಂಗಣ ನಿರ್ಮಾಣ ಮಾಡಿಕೊಡುವಂತೆ ಮನವಿ ಮಾಡಿದರು.
ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ದೊಡ್ಡಯ್ಯ ಗಣಾಚಾರಿ ಮಾತನಾಡಿ ಮಸ್ಕಿ ತಾಲೂಕಿನ ಯುವಕರು ಭಾರತದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ, ಅವರು ಅತ್ಯುತ್ತಮ ಕ್ರೀಡಾ ಪ್ರತಿಭೆಯನ್ನು ಹೊಂದಿದವರಾಗಿದ್ದಾರೆ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವುದಕ್ಕೆ, ನಮ್ಮ ತಾಲೂಕಿನಲ್ಲಿ ಉತ್ತಮವಾದ ಕ್ರೀಡಾಂಗಣವಿಲ್ಲ, ಕ್ರೀಡಾಂಗಣ ನಿರ್ಮಿಸಿಕೊಟ್ಟರೆ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದೆ ಎಂದರು.
ಮಸ್ಕಿ ತಾಲೂಕಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾಂಗಣ ಮಂಜೂರಾಗಿದ್ದು, ಆದರೆ ಒಂದುವರೆ ವರ್ಷದಿಂದ ನೆನೆಗುದಿಗೆ ಬಿದ್ದಿದೆ, ಕಾರಣ ಮಕ್ಕಳಿಗೆ ಮತ್ತು ಯುವಕರಿಗೆ ಕ್ರೀಡಾ ಅಭ್ಯಾಸಮಾಡಲು ಕ್ರೀಡಾಂಗಣ ಇಲ್ಲ ಹಾಗಾಗಿ ನೂತನ ತಾಲೂಕಿಗೆ ಕ್ರೀಡಾಂಗಣ ನಿರ್ಮಾಣ ಮಾಡಿದರೆ ತಾಲೂಕು ಜಿಲ್ಲೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ತಾಲೂಕಿನ ಮಕ್ಕಳು ಭಾಗವಹಿಸಿ ತಾಲೂಕಿನ ಕೀರ್ತಿಯನ್ನು ಎತ್ತಿ ಹಿಡಿಯುತ್ತಾರೆ ಎಂದು ದೊಡ್ಡಯ್ಯ ಗಣಚಾರಿ ತಿಳಿಸಿದರು.
ಉಪಾಧ್ಯಕ್ಷರಾದ ಸಿದ್ದರಾಮಯ್ಯ ಗಡ್ಡಿಮಠ, ಖಜಾಂಚಿಯಾದ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ರವೀಂದ್ರ ಕೆ, ಹಾಗೂ ರಾಮಪ್ಪ ಕರಡಿ, ಎಂ ಎಂ ಅಬ್ದುಲ್, ಮೋಹನ್ ಬಾವಿಮನಿ, ಅಮರೇಶ್ ಪತ್ತಾರ್, ಇತರರು ಇದ್ದರು