ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳನ್ನು ತಡೆಗೆ ಒತ್ತಾಯಿಸಿ ಎನ್‌ಎಸ್‌ಯುಐ ಪ್ರತಿಭಟನೆ
e- ಸುದ್ದಿ ಮಸ್ಕಿ
ದೇಶ ಹಾಗೂ ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿವೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಭಾರತೀಯ ರಾಷ್ಟೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ದೈವದಕಟ್ಟೆಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಖಲೀಲ್ ವೃತ್ತ, ಅಶೋಕ ವೃತ್ತ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಪ್ರತಿಭಟನೆ ನಡೆಸಿ ಹಳೆಬಸ್ ನಿಲ್ದಾಣದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ತಹಸೀಲ್ದಾರ್ ಕವಿತಾ.ಆರ್.ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇತ್ತಿಚಿನ ದಿನಗಳಲ್ಲಿ ಸಮಾಜದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಕಾಮುಕರಿಗೆ ಸರಿಯಾದ ರೀತಿಯಲ್ಲಿ ಶಿಕ್ಷೆಯಾಗದೇ ಇರುವುದರಿಂದ ಇಂತಹ ಪ್ರಕರಣಗಳು ಪುನ ಮರುಕರಿಳಿಸುತ್ತಿವೆ. ಇದರಿಂದ ಪೊಷಕರು ಭಯಗೊಂಡು ಹೆಣ್ಣು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುವಂತಾಗಿದೆ. ಇದರಿಂದ ಶಿಕ್ಷಣದ ಮೇಲೆ ಪೆಟ್ಟು ಬೀಳುತ್ತಿದೆ. ಆದ್ದರಿಂದ ಸರ್ಕಾರ ಇಂತಹ ಸಮಾಜ ಘಾತುಕ ಶಕ್ತಿಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಬೇಕು ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ತಡೆಟ್ಟಲು ಬೀಗಿಯಾದ ಕಾನೂನುಗಳನ್ನು ತಂದು ತಪ್ಪಿಸ್ಥರಿಗೆ ಕಠಿಣ ಶಿಜ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ತಾಲೂಕು ಘಟಕದ ಅಧ್ಯಕ್ಷ ವೀರಭದ್ರ ಕೊಠಾರಿ, ಉಪಾಧ್ಯಕ್ಷ ಸುಮನ್ನ ಪೂಜಾರಿ, ಶಾಸಕರ ಪುತ್ರ ಸತೀಶ್‌ಗೌಡ, ವಿದ್ಯಾರ್ಥಿನಿಯರಾದ ಅರ್ಪಿತಾ, ರಂಗಮ್ಮ, ಇಬ್ರಾಹಿಂ, ಆಲಂಬಾಷ, ಮೌನೇಶ ಕೊಠಾರಿ, ಬಸವರಾಜ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.