ಸದಾಶಿವ ಆಯೋಗದ ವರದಿ ತಿರಸ್ಕರಿಸಲು ಒತ್ತಾಯ

ಸದಾಶಿವ ಆಯೋಗದ ವರದಿ ತಿರಸ್ಕರಿಸಲು ಒತ್ತಾಯ
e- ಸುದ್ದಿ ಮಸ್ಕಿ
ಮಸ್ಕಿ : ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಬೇಕು ಹಾಗೂ ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್ 4 ರಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಸಮಿತಿಯ ಮುಖಂಡ ರವಿಕುಮಾರ ಚಿಗರಿ ತಿಳಿಸಿದ್ದಾರೆ
ಪಟ್ಟಣದ ಪ್ರವಾಸಿ ಮಂದಿರಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ‘ ಪರಿಶಿಷ್ಟ ಜಾತಿ ಜನರು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸಮಾನ ಸೌಲಭ್ಯಗಳು ಸಿಗುವಂತೆ ಮಾಡಬೇಕಾದ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಸಮುದಾಯಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ.  ಸದಾಶಿವ ಆಯೋಗ ವರದಿಯನ್ನು ಜಾರಿಗೆ ತರುವುದಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು.
ಅಲೆಮಾರಿ ಸಮುದಾಯಗಳಿಗೆ ಪೂರ್ವಕವಾಗಿ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ನೆಪದಲ್ಲಿ ನಮ್ಮ ಸಹೋದರ ಹೊಲೆಯ ಮಾದಿಗ ಸಮುದಾಯವನ್ನು ಎತ್ತಿಕಟ್ಟಿ ಸಮಾಜವನ್ನು ಒಡೆಯುವ ಕಾರ್ಯದಲ್ಲಿ ತೊಡಗುವ ಜೊತೆಗೆ  ಲಂಬಾಣಿ ಸಮಾಜದ  ಮತ್ತು ಸ್ವಾಮೀಜಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದನ್ನು ಸಮಿತಿ ಖಂಡಿಸುತ್ತದೆ ಎಂದರು.
ಪುರಸಭೆ ಮಾಜಿ ಸದಸ್ಯ ನೀಲಕಂಠಪ್ಪ ಭಜಂತ್ರಿ, ಮಲ್ಲಯ್ಯ ಗುಡಿಸಲಿ, ಮಲ್ಲಯ್ಯ ನಾಗರಾಳ, ಅಮರೇಶ ಅಡವಿಭಾವಿ ತಾಂಡಾ, ಸೇರಿದಂತೆ ಸಂರಕ್ಷಣಾ ಸಮಿತಿಯ ಮುಖಂಡರು, ಪದಾಧಿಕಾರಿಗಳು ಇದ್ದರು.
Don`t copy text!