ಗಾಂಧೀಜಿ, ಶಾಸ್ತ್ರೀಜಿ ದೇಶದ ಎರಡು ಕಣ್ಣುಗಳು-ಬಸನಗೌಡ ತುರ್ವಿಹಾಳ

ಗಾಂಧೀಜಿ, ಶಾಸ್ತ್ರೀಜಿ ದೇಶದ ಎರಡು ಕಣ್ಣುಗಳು-ಬಸನಗೌಡ ತುರ್ವಿಹಾಳ
e- ಸುದ್ದಿ ಮಸ್ಕಿ
ಮಸ್ಕಿ: ಮಹಾತ್ಮ ಗಾಂಧಿ ಹಾಗೂ  ಲಾಲ್ ಬಹದ್ದೂರ್ ಶಾಸ್ತ್ರಿ ಅವರುಗಳು ಭಾರತದ ಎರಡು ಕಣ್ಣುಗಳಿದಂತೆ ಎಂದು ಶಾಸಕ ಬಸನಗೌಡ ತುರ್ವಿಹಾಳ ಹೇಳಿದರು. .  ಶನಿವಾರ ಪಟ್ಟಣದ ಗಾಂಧಿ ನಗರದಲ್ಲಿನ ಮಹಾತ್ಮ ಗಾಂಧಿಜಿ ಪ್ರತಿಮೆಗೆ ತಾಲ್ಲೂಕು ಆಡಳಿತ ಪರವಾಗಿ ಶಾಸಕ ಆರ್. ಬಸನಗೌಡ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದರು.
ತಹಶೀಲ್ದಾರ್ ಕವಿತಾ ಆರ್. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ  ಅಧಿಕಾರಿ ಬಾಬು ರಾಠೋಡ,  ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ, ಸಬ್ ಇನ್ ಸ್ಪೆಕ್ಟರ್ ಸಿದ್ಧರಾಮ ಸೇರಿದಂತೆ  ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ಬಿಜೆಪಿ ಮುಖಂಡರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗಾಂಧಿಜಿ ಪ್ರತಿಮೆ ಮಾಲಾರ್ಪಣೆ ಮಾಡಿದರು.
ಕಾಂಗ್ರೆಸ್ ಕಚೇರಿ ಹಾಗೂ ಶಾಸಕರ ಕಚೇರಿಯಲ್ಲಿ ಶಾಸಕ ಆರ್. ಬಸನಗೌಡ, ಪಕ್ಷದ ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ  ಸೇರಿದಂತೆ ಪಕ್ಷದ ಪದಾಧಿಕಾರಿಗಳು ಗಾಂಧಿಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಬಿಜೆಪಿ ಕಚೇರಿಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಪಕ್ಷದ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಮಾಲಾರ್ಪಣೆ ಮಾಡಿದರು.
ಶಿಷ್ಟಾಚಾರ ಉಲ್ಲಂಘನೆ
ಮಸ್ಕಿ: ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವೇಳೆ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸಿದ್ದನ್ನು ಕಂಡು ಶಾಸಕ ಆರ್. ಬಸನಗೌಡ ತುರ್ವಿಹಾಳ ತಾಲ್ಲೂಕು ಮಟ್ಟದ  ಅಧಿಕಾರಿಗಳ ಮೇಲೆ ಗರಂ ಆದ ಘಟನೆ ಶನಿವಾರ ನಡೆಯಿತು.
ಮೊದಲಿಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದನ್ನು ಕಂಡ ಶಾಸಕ ಆರ್.ಬಸನಗೌಡ  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕೊವಿಡ್ ನಿಯಂತ್ರಣಕ್ಕೆ ಸಹಕರಿಸಿ- ಶಾಸಕ ಬಸನಗೌಡ ತುರ್ವಿಹಾಳ
ಮಸ್ಕಿ: ಕೊವಿಡ್ ನಿಯಂತ್ರಣಕ್ಕೆ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ತಾಲ್ಲೂಕು ಆಡಳಿತಕ್ಕೆ ಸಹಕರಿಸಬೇಕು ಎಂದು ಶಾಸಕ ಆರ್. ಬಸನಗೌಡ ಕರೆ ನೀಡಿದರು.
ಪಟ್ಟಣದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಲಸಿಕಾ ಜಾಗೃತಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ ‘ಕೊವಿಡ್ ನಿಯಂತ್ರನಕ್ಕೆ ಸರ್ಕಾರ ಎಲ್ಲಾ ಮುಂಜಾಗೃತ ಕ್ರಮ ಕೈಗೊಂಡಿದೆ. ಕೊವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ಕೊವಿಡ್ ಅಲೆಯನ್ನು ತಡೆಯಬಹುದು ಎಂದರು.
ತಹಶೀಲ್ದಾರ್ ಕವಿತಾ ಆರ್. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ, ಸಬ್ ಇನ್ ಸ್ಪೆಕ್ಟರ್ ಸಿದ್ದರಾಮ ಸೇರಿದಂತೆ ತಾಲ್ಲೂಕಿನ ಅಧಿಕಾರಿಗಳು ಇದ್ದರು. ಪ್ರಮುಖ ಬೀದಿಗಳಲ್ಲಿ ಜಾಗೃತಾ ಜಾಥಾ ನಡೆಯಿತು.
Don`t copy text!