ಆಡಳಿತ ಭಾಷೆ ಕನ್ನಡ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅನುಷ್ಠಾನ ಗೊಳ್ಳಲಿ- ಶಾಸಕ ಬಸನಗೌಡ ತುರ್ವಿಹಾಳ

ಆಡಳಿತ ಭಾಷೆ ಕನ್ನಡ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅನುಷ್ಠಾನ ಗೊಳ್ಳಲಿ- ಶಾಸಕ ಬಸನಗೌಡ ತುರ್ವಿಹಾಳ

e- ಸುದ್ದಿ ಮಸ್ಕಿ

ಸರ್ಕಾರಿ ಕಚೇರಿಗಳಲ್ಲಿನ ಆಡಳಿತ ಕನ್ನಡ ಭಾಷೆಯಲ್ಲಿಯೇ ನಡೆಯುವಂತಾಗಬೇಕು ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಕರೆ ನೀಡಿದರು
ಕನ್ನಡ ರಾಜ್ಯೋತ್ಸವ ನಿಮಿತ್ತ ಗುರುವಾರ ಪಟ್ಟಣದ ಸರ್ಕಾರಿ ಕೇಂದ್ರ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ‘ಗೀತ ಗಾಯನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಕನ್ನಡ ಭಾಷೆ, ನೆಲ ಜಲ ಸಮಸ್ಯೆ ಬಂದಾಗ ಕನ್ನಡಿಗರು ಒಗ್ಗಟ್ಟಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಸರ್ಕಾರಿ ಕಚೇರಿಗಳಲ್ಲಿನ ವ್ಯವಹಾರವನ್ನು ಕನ್ನಡದಲ್ಲಿಯೇ ಮಾಡುವಂತೆ ಕಟ್ಟು ನಿಟ್ಟಾಗಿ ಆದೇಶ ಜಾರಿ ಮಾಡಿದರೆ ಕನ್ನಡ ಬಳಕೆ ಪರಿಣಾಮಕಾರಿಯಾಗುತ್ತದೆ ಎಂದರು.
ರಾಜ್ಯೋತ್ಸವ ಆಚರಣೆ ನಿಮಿತ್ತ ಸರ್ಕಾರ ಗೀತ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಉತ್ತಮ ಕೆಲಸ ಮಾಡಿದೆ ಎಂದರು.
ಪ್ರತಿಯೊಬ್ಬ ಕನ್ನಡಿಗನು ಕನ್ನಡದಲ್ಲಿ ವ್ಯವಹಾರ ಮಾಡಬೇಕು, ಕನ್ನಡದಲ್ಲಿಯೇ ಮಾತನಾಡುವ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಬೇಕು ಎಂದರು,
ತಹಶೀಲ್ದಾರ್ ಕವಿತಾ ಆರ್. ಪ್ರತಿಜ್ಞಾ ವಿಧಿ ಬೋಧಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ, ಸಿಪಿಐ ಸಂಜೀವ್ ಬಳಿಗಾರ, ಸಬ್ ಇನ್ ಸ್ಪೆಕ್ಟರ್ ಸಿದ್ದರಾಮ, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ, ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೆಂಚಪ್ಪ,  ಪ್ರತಾಪಗೌಡ ಪಾಟೀಲ್ ಪೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್, ಕನ್ನಡ ಪರ ಸಂಘಟನೆಗಳ ಮುಖಂಡರಾದ ಅಶೋಕ ಮುರಾರಿ, ದುರ್ಗರಾಜ್ ವಟಗಲ್ , ಬಸವರಾಜ ಉದ್ಬಾಳ. ಆರ್.ಕೆ. ನಾಯಕ, ಕೆ. ಮಲ್ಲಯ್ಯ, ರಾಘವೇಂದ್ರ ಗುತ್ತೆದಾರ, ಭರತ್ ಶೇಠ, ಕಸಾಪ ನಿಕಟಪೂರ್ವ ಅಧ್ಯಕ್ಷ ಘನಮಠದಯ್ಯ ಸಾಲಿಮಠ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶಂಕರಗೌಡ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರು, ಶಾಲೆ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ ಗೀತ ಗಾಯನ ಕ್ರಾಯಕ್ರಮ ನಡೆಯಿತು.

Don`t copy text!