ಕಣ್ಣಿನ ಭಾಗ್ಯ ಕಲ್ಪಿಸುವ ಲಯನ್ಸ್ ಕಾರ್ಯ ಶಾಘ್ಲನೀಯ- ಬಸನಗೌಡ ತುರ್ವಿಹಾಳ
e-ಸುದ್ದಿ ಮಸ್ಕಿ
ಉಚಿತ ನೇತ್ರ ಚಿಕಿತ್ಸಾ ಶಿಬಿರ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ಶಿಬಿರಗಳನ್ನು ಏರ್ಪಡಿಸುತ್ತಿರುವ ಲಯನ್ಸ್ ಸಂಸ್ಥೆಯಿಂದ ಗ್ರಾಮೀಣ ಭಾಗದ ಬಡ ಜನರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ಲಯನ್ಸ್ ಸೇರಿದಂತೆ ವಿವಿಧ ಸಂಸ್ಥೆಗಳಿಂದ ಶುಕ್ರವಾರ ಏರ್ಪಡಿಸಿದ್ದ ಉಚಿತ ನೇತ್ರ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ‘ಎರಡು ವರ್ಷಗಳಿಂದ ಕೊವಿಡ್ ಹಿನ್ನೆಲೆಯಲ್ಲಿ ಇಂತಹ ಶಿಬಿರಗಳನ್ನು ನಡೆದಿರಲಿಲ್ಲ. ಬಡ ಜನರ ಹಾಗೂ ಕೂಲಿ ಕಾರ್ಮಿಕರ ನೆರವಿಗೆ ಬಂದಿರುವ ಲಯನ್ಸ್ ಸಂಸ್ಥೆ ಮತ್ತೆ ಉಚಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ ಎಂದರು.
ಮನುಷ್ಯನಿಗೆ ಆರೋಗ್ಯ ಮುಖ್ಯವಾಗಿದೆ, ಪ್ರತಿಯೊಬ್ಬರು ತಮ್ಮ ಆರೋಗ್ಯದ ಕಡೆ ಗಮನ ಕೊಡಬೇಕು, 18 ವರ್ಷ ಮೇಲ್ಪಟ್ಟು ಇರುವವರು ಕಡ್ಡಾಯವಾಗಿ ಕೊವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ಕೊವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಸಂಪೂರ್ಣ ಕೊವಿಡ್ ಮುಕ್ತ ಸಮಾಜವನ್ನಾಗಿ ಮಾಡಬೇಕು ಎಂದರು.
ಶಿಬಿರ ಉದ್ಘಾಟಿಸಿದ ಲಯನ್ಸ್ ಸಂಸ್ಥೆಯ ಜಿಲ್ಲಾ ಗೌವರ್ನರ್ ಶ್ರೀಕಾಂತ ಉಜ್ವಲ ಮೋರೆ ಮಾತನಾಡಿ ಪಟ್ಟಣದಲ್ಲಿ ಲಯನ್ಸ್ ಸಂಸ್ಥೆಯ ಸತತವಾಗಿ ಇಂತಹ ಸಾಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಉತ್ತಮ ಹೆಸರು ಪಡೆದಿದೆ ಎಂದರು,
ಲಯನ್ಸ್ ಸಂಸ್ಥೆಯ ಅಧ್ಯಕ್ಷ ಸಿದ್ಧಲಿಂಗಯ್ಯ ಸೊಪ್ಪಿಮಠ, ಸುಗಲಾ ಎಳಮಲಿ, ಶ್ರೀನಿವಾಸ್ ಗುಪ್ತಾ, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ, ವೈದ್ಯಾಧಿಕಾರಿ ಡಾ. ಬಸವಶ್ರೀ ಸೇರಿದಂತೆ ವಿವೇಕಾನಂದ ಸೇವಾಶ್ರಮ, ಭ್ರಮರಾಂಬಾ ದೇವಸ್ಥಾನ ಸಮಿತಿ ಮುಖಂಡರು ಇದ್ದರು.