ಮಸ್ಕಿ ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ತಹಸೀಲ್ದಾರ್ ಕವಿತಾ.ಆರ್.ಬೇಟಿ ಪರಿಶೀಲನೆ
ತುರ್ತಾಗಿ ಬೆಳೆ ಹಾನಿ ವರದಿ ಸಲ್ಲಿಸುವಂತೆ ಸೂಚನೆ
e-ಸುದ್ದಿ ಮಸ್ಕಿ
ಇತ್ತಿಚಿಗೆ ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಮಸ್ಕಿ ತಹಸೀಲ್ದಾರ್ ಕವಿತಾ.ಆರ್. ಅವರು ಭಾನುವಾರ ಬೇಟಿ ನೀಡಿ ಪರಿಶೀಲನೆ ನಡೆಸಿ ತುರ್ತಾಗಿ ಬೆಳೆಹಾನಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು
ಮಸ್ಕಿ ತಾಲೂಕಿನ ಬಳಗಾನೂರು, ಬುದ್ದಿನ್ನಿ, ಜಾಲಬಾಡಗಿ, ಬೆಳ್ಳಿಗಾನೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯಿಂದ ಬೆಳೆ ಹಾನಿಯಾಗಿರುವ ಬೆಳೆಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿ ರೈತರ ಸಮಸ್ಯೆಗಳನ್ನು ಆಲಿಸಿದರು. ತಾಲೂಕಿನಲ್ಲಿ ಮಳೆಯಿಂದ ಹಾನಿಗೊಳಗಾಗದ ಬೆಳೆಗಳಿಗೆ ಪರಿಹಾರ ಒದಗಿಸುವುದಕ್ಕಾಗಿ ಪ್ರಾಥಮಿಕವಾಗಿ ಮಾಹಿತಿಯನ್ನು ಸಂಗ್ರಹಿಸಿ ಈಗಾಗಲೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಮಳೆಯಿಂದ ಹಾನಿಯಾಗಿರುವ ಬೆಳೆ ಪರಿಹಾರದ ಅರ್ಜಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಬೆಳೆ ಹಾನಿಯಾರುವ ರೈತರು ನಿಮ್ಮ ವ್ಯಾಪ್ತಿಯ ಸಂಭಂಧಸಿದ ಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಎಂದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಇದ್ದರು.
ಕೇಂದ್ರಗಳಿಗೆ ಬೇಟಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಮತಗಟ್ಟೆ ಕೇಂದ್ರಗಳಿಗೆ ತಹಸೀಲ್ದಾರ್ ಬೇಟಿ ನೀಡಿ ಬೇಕಾದ ಅಗತ್ಯ ಸೌಲಭ್ಯಗಳನ್ನು ಸಿದ್ದತೆ ಮಾಡಿಕೊಳ್ಳುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ: ತಾಲೂಕಿನ ವಿವಿದೆಡೆ ತಹಸೀಲ್ದಾರ್ ಕವಿತಾ.ಆರ್. ಸಂಚರಿಸಿ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಗ್ರಾಮ ಮಟ್ಟದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.