ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪಾಠ ಕಲಿಸಿ –ಶಾಸಕ ಬಸನಗೌಡ ತುರ್ವಿಹಾಳ

 

ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪಾಠ ಕಲಿಸಿ –ಶಾಸಕ ಬಸನಗೌಡ ತುರ್ವಿಹಾಳ

e-ಸುದ್ದಿ ಮಸ್ಕಿ

ಮಸ್ಕಿ: ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಕುಟುಂಬ ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಕರೆ ನೀಡಿದರು.
ಪಟ್ಟಣದ ಗಾಂಧಿ ನಗರದ ವಿವಿಧ ವಾರ್ಡ್ ಗಳಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ ಪುರಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು  ಅಧಿಕಾರ ಹಿಡಿಯುವುದು ಖಚಿತವಾಗಿದೆ. ಆ ಕಾರಣಕ್ಕೆ ಬಿಜೆಪಿ ಅವರು ಅಭ್ಯರ್ಥಿಗಳನ್ನು ಖರೀದಿ ಮಾಡಲು ಹೋರಟಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಿಂದಲೇ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯ, ಬಿಜೆಪಿಯವರು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಿ ಅಧಿಕಾರಕ್ಕೆ ಬರುತ್ತಿದ್ದಾರೆ. ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದ್ದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾತ್ರ ಎಂದರು.
ಬಿಜೆಪಿಯವರ ದಬ್ಬಾಳಿಕೆಗೆ ಕಾರ್ಯಕರ್ತರು ಅಂಜಬೇಕಾಗಿಲ್ಲ, ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಮಾತನಾಡಿ ಜನರ ಸಮಸ್ಯೆಗಳಿಗೆ ಕಾಂಗ್ರೆಸ್ ನಿಂದ ಪರಿಹಾರ ಸಾಧ್ಯ ಎಂದರು.
ಮುಖಂಡ ಶ್ರೀಶೈಲಪ್ಪ ಬ್ಯಾಳಿ, ಎಚ್. ಬಿ. ಮುರಾರಿ, ಮಹಾಂತೇಶ ಹೂವಿನಭಾವಿ, ವೆಂಕಟರೆಡ್ಡಿ, ಅಭ್ಯರ್ಥಿ ಗಳಾದ ನರಸಪ್ಪ ಭಜಂತ್ರಿ, ದೇವಮ್ಮ ಸೇರಿದಂತೆ ಅನೇಕ ಮುಖಂಡರು, ಪಕ್ಷದ ಪದಾಧಿಕಾರಿಗಳು ಇದ್ದರು.
ಗಾಂಧಿ ನಗರದ 22, 23 ವಾರ್ಡ್ ಸೇರಿದಂತೆ ವಿವಿಧ ವಾರ್ಡ್ ಗಳಲ್ಲಿ ಶಾಸಕ ಆರ್. ಬಸನಗೌಡ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು.

 

Don`t copy text!