ಪುರಸಭೆಯಲ್ಲಿ ಬಿಜೆಪಿ ಅಧಿಕಾರ ಖಚಿತ –ಸಂಗಣ್ಣ ಕರಡಿ

ಪುರಸಭೆಯಲ್ಲಿ ಬಿಜೆಪಿ ಅಧಿಕಾರ ಖಚಿತ –ಸಂಗಣ್ಣ ಕರಡಿ

e-ಸುದ್ದಿ ಮಸ್ಕಿ

ಮಸ್ಕಿ: ಡಿ. 27 ರಂದು ನಡೆಯುವ ಪುರಸಭೆ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಮಂಗಳವಾರ ಬಿಜೆಪಿ ಪರವಾಗಿ ಸಂಸದ ಕರಡಿ ಸಂಗಣ್ಣ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.
1ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಲಿಲಿತಾ ಪ್ರಕಾಶ ಪರವಾಗಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ ಸಂಸದ ಸಂಗಣ್ಣ ಕರಡಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಬಲ ವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಿದೆ ಎಂದರು.
ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ಇಡೀ ವಿಶ್ವವೇ ಅವರನ್ನು ಮೆಚ್ಚಿಕೊಂಡಿದೆ. ದೇಶದಲ್ಲಿ ಐಕ್ಯತೆ ಹಾಗೂ ಭಧ್ರತೆ ದೃಷ್ಠಿಯಿಂದ ಬಿಜೆಪಿ ಅಧಿಕಾರದಲ್ಲಿರಬೇಕು ಎಂದರು.
ಲಲಿತಾ ಪ್ರಕಾಶ ಅವರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.,
ಬಿಜೆಪಿ ಮಂಡಲ  ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಡಾ, ಬಿ.ಎಚ್, ದಿವಟರ್, ಬಸನಗೌಡ ಪೊಲೀಸ್ ಪಾಟೀಲ್, ಉಮಕಾಂತಪ್ಪ ಸಂಗನಾಳ, ದೊಡ್ಡಪ್ಪ ಕಡಬೂರು, ಎಂ. ಪ್ರಭುದೇವ್, ನಿವೃತ್ತ ಶಿಕ್ಷಕ ಯಲ್ಲಪ್ಪ ಜಾಲಿಹಾಳ, ಬಿಜೆಪಿ ಎಸ್ಸಿ ಮೊರ್ಚದ ಜಿಲ್ಲಾ ಘಟಕದ ಅದ್ಯಕ್ಷ ಶರಣಬಸವವಕೀಲ್, ಪುರಸಭೆ ಮಾಜಿ ಸದಸ್ಯರಾದ ಕಿರಣ್ ಸಾನಬಾಳ,  ಅಭಿಜಿತ್ ಪಾಟೀಲ್, ಮಲ್ಲಿಕಾರ್ಜುನ ಬೈಲಗುಡ್ಡ, ಅಭ್ಯರ್ಥಿ ಲಲಿತಾ ಪ್ರಕಾಶ ಸೇರಿದಂತೆ ಇತರರು ಇದ್ದರು

 

Don`t copy text!