ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದು

ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್‌ ಪಾಸಿಟಿವ್‌

 

 e-ಸುದ್ದಿ  ಬೆಂಗಳೂರು

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಮುಖ್ಯಮಂತ್ರಿಯವರು ಕರೋನಾ ಸೋಂಕಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಅವರು, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಯವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಧನ್ಯವಾದ ತಿಳಿಸಿದ್ದಾರೆ.

Don`t copy text!