ವೀರಗಣಾಚಾರಿ ಶರಣ ಮಡಿವಾಳ ಮಾಚಯ್ಯನವರ ಜಯಂತಿ

ವೀರಗಣಾಚಾರಿ_ಶರಣ_ಮಡಿವಾಳ_ಮಾಚಯ್ಯನವರ

ಜಯಂತಿ

ಎತ್ತೆತ್ತ ನೋಡಿದಡೆ ಅತ್ತತ್ತ ಬಸವನೆಂಬ ಬಳ್ಳಿ.
ಎತ್ತಿ ನೋಡಿದಡೆ ಲಿಂಗವೆಂಬ ಗೊಂಚಲು.
ಒತ್ತಿ ಹಿಂಡಿದಡೆ ಭಕ್ತಿಯೆಂಬ ರಸವಯ್ಯಾ.
ಆಯತ ಬಸವಣ್ಣನಿಂದ, ಸ್ವಾಯತ ಬಸವಣ್ಣನಿಂದ.
ಸನ್ನಹಿತವು ಬಸವಣ್ಣನಿಂದ, ಗುರು ಬಸವಣ್ಣನಿಂದ,
ಲಿಂಗ ಬಸವಣ್ಣನಿಂದ. ಜಂಗಮ ಬಸವಣ್ಣನಿಂದ.
ಪಾದೋದಕ ಬಸವಣ್ಣನಿಂದ, ಪ್ರಸಾದ ಬಸವಣ್ಣನಿಂದ.
ಅತ್ತ ಬಲ್ಲಡೆ ನೀವು ಹೇಳಿರೆ, ಇತ್ತ ಬಲ್ಲಡೆ ನೀವು ಕೇಳಿರೆ.
ಬಸವಾ ಬಸವಾ ಬಸವಾ ಎಂದು ಮಜ್ಜನಕ್ಕೆರೆಯದವನ ಭಕ್ತಿ,ಶೂನ್ಯ ಕಾಣಾ, #ಕಲಿದೇವರದೇವಾ.

ಸುಖವೊಂದು ಕೋಟಿ ಬಂದಲ್ಲಿ ಬಸವಣ್ಣನ ನೆನೆವುದು.
ದುಃಖವೊಂದು ಕೋಟಿ ಬಂದಲ್ಲಿ ಬಸವಣ್ಣನ ನೆನೆವುದು.
ಲಿಂಗಾರ್ಚನೆಯ ಮಾಡುವಲ್ಲಿ ಬಸವಣ್ಣನ ನೆನೆವುದು.
ಜಂಗಮಾರ್ಚನೆಯ ಮಾಡುವಲ್ಲಿ ಬಸವಣ್ಣನ ನೆನೆವುದು.
ಇದು ಕಾರಣ ಬಸವಣ್ಣನ ನೆನೆದಲ್ಲದೆ ಎನಗೆ ಭಕ್ತಿಯಿಲ್ಲವೆಂದು ನಾನು ಬಸವಣ್ಣ ಬಸವಣ್ಣ ಬಸವಣ್ಣನೆನುತಿರ್ದೆನು ಕಾಣಾ, ಕಲಿದೇವರದೇವಾ

 

Don`t copy text!