e-ಸುದ್ದಿ ರಾಯಚೂರು
ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿಯವರು ಕೋವಿಡ್ 19 ಸಂದರ್ಭದಲ್ಲಿ ಅಂಧ, ಅಂಗವಿಕಲ, ಪಾರ್ಶ್ವವಾಯು, ಮಾನಸಿಕ ಅಸ್ವಸ್ಥರನ್ನು ಹುಡುಕಿ ಅವರಿಗೆ ವೈದ್ಯಕೀಯ ಸೌಲಭ್ಯ ಆಹಾರ ಹಾಗೂ ವಿಶೇಷವಾಗಿ ಸಾಮಾಜಿಕ ಸೇವೆಯಲ್ಲಿ ನಿರತವಾಗಿದ್ದಕ್ಕಾಗಿ ಜಿಲ್ಲಾ ಆಡಳಿತ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಯಚೂರಿನಲ್ಲಿ ನೀಡಲಾಯಿತು.
ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ್ ಹಾಗೂ ಜಿಲ್ಲಾಧಿಕಾರಿಗಳು, ಪೋಲೀಸ್ ವರಿಷ್ಠಾಧಿಕಾರಿ ಹಾಗೂ ಇತರರು ಉಪಸ್ಥಿತರಿದ್ದರು ಈ ಕಾರ್ಯಕ್ರಮವು ರಾಯಚೂರಿನ ಡಿಎಆರ್ ಮೈದಾನದಲ್ಲಿ ನೆಡೆಯಿತು..