ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಿ -ತಹಶೀಲ್ದಾರ್ ಬಲರಾಮ ಕಟ್ಟಿಮನಿ
e-ಸುದ್ದಿ ಲಿಂಗಸುಗೂರು
ಜನಸಾಮಾನ್ಯರು ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಿ ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ತಿಳಿಸುದರು.
ಜಿಲ್ಲಾ ಆಡಳಿತ ರಾಯಚೂರು ತಾಲೂಕ ಆಡಳಿತ ಲಿಂಗಸುಗೂರು ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಇಂದು ಲಿಂಗಸುಗೂರು ತಾಲೂಕಿನ ಗುಂತಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಳಗುಂದಿ ಗ್ರಾಮದಲ್ಲಿ ತಹಶೀಲ್ದಾರ ಬಲರಾಮ ಕಟ್ಟಿಮನಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿಯೂ ತಿಂಗಳಿನ ಮೂರನೇ ಶನಿವಾರದಂದು ಕಾರ್ಯಕ್ರಮವನ್ನು ಮಾಡಲಾಗುತ್ತಿದ್ದು ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ತಾವು ಇದ್ದಲ್ಲಿಯೇ ಪಡೆದುಕೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಕಂದಾಯ ಇಲಾಖೆಯಿಂದ ಪಿಂಚಣಿ, ಪಹಣಿ ತಿದ್ದುಪಡಿ, ಪೋತಿ ವಿರಾಸತ್ ,ಜನನ-ಮರಣ ಪ್ರಮಾಣ ಪತ್ರ ನೀಡಲಾಗುತ್ತಿದ್ದು ಗ್ರಾಮದ ಜನರಿಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ ಎಂದು ತಿಳಿಸಿದರು .
ನಂತರ ಬಿಇಒ ಹೊಂಬಣ್ಣ ರಾಠೋಡ್ ಮಾತನಾಡಿ ಯಳಗುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಒಟ್ಟು 92 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು 1 ರಿಂದ 5 ನೇ ತರಗತಿಯವರೆಗೆ ಇದ್ದು ಶಾಲಾ ಕೊಠಡಿಗಳ ಕೊರತೆಯಿಲ್ಲ. ಇಲ್ಲಿ 6 ನೆ ತರಗತಿಯನ್ನು ಆರಂಭ ಮಾಡುವಂತೆ ಬೇಡಿಕೆ ಇದ್ದು ಅದಕ್ಕೆ ಸಂಬಂಧಿಸಿದಂತೆ ಈ ವರ್ಷದ ಯೋಜನೆಯಲ್ಲಿ ಸೇರಿಸಿ ಸರ್ಕಾರಕ್ಕೆ ಸಲ್ಲಿಸಲಾಗುವದು ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಅಮರೇಶ ಮಾತನಾಡಿ ಗುಂತಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಿಬಿ ವೈರಸ್ ಹೊಂದಿರುವ ಜನರಿದ್ದು ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗಬಹುದು. ಪರೀಕ್ಷೆ ಮಾಡಿ ಉಚಿತ ಚಿಕಿತ್ಸೆ ಮತ್ತು ಔಷಧಿ ನೀಡಲಾಗುವುದು ಪ್ರತಿಯೊಬ್ಬರು ಆಯುಷ್ಮಾನ್ ಕಾರ್ಡ್ ಅನ್ನು ಮಾಡಿಸಿಕೊಳ್ಳಿ ಇದರಿಂದ ಆಪರೇಷನ್ ಗಳಿಗೆ ತುಂಬಾ ಅನುಕೂಲವಾಗುವದು ಎಂದು ತಿಳಿಸಿದರು. ಸ್ಥಳದಲ್ಲಿಯೇ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ತಾಲೂಕು ಅಧಿಕಾರಿಗಳು ವಿತರಿಸಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಅಮರೇಗೌಡ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ, ಪಶು ಇಲಾಖೆಯ ಡಾ. ರಾಚಪ್ಪ, ಸಮಾಜ ಕಲ್ಯಾಣ ಅಧಿಕಾರಿ ರಾಜೇಂದ್ರಕುಮಾರ ಕುಮಾರ ,ಜಿಲ್ಲಾ ಪಂಚಾಯಿತಿ ಉಪವಿಭಾಗ ಇಂಜಿನಿಯರ್ ಶಿವಕುಮಾರ , ಪಶುವೈದ್ಯಾಧಿಕಾರಿ ರಾಚಪ್ಪ ,ಗುರುಗುಂಟಾ ಉಪತಹಸೀಲ್ದಾರ್ ರಂಗಪ್ಪ ನಾಯಕ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಗುಂತಗೋಳ ಗ್ರಾಮ ಪಂಚಾಯತ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು ಇದ್ದರು.