ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

e-ಸುದ್ದಿ ಲಿಂಗಸುಗೂರು

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು  ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ನ್ಯಾಯವಾದಿಗಳ ಸಂಘ ಮತ್ತು ತಾಲೂಕು ಆಡಳಿತ ಲಿಂಗಸುಗೂರು ಇವರ ಸಂಯುಕ್ತ ಆಶ್ರಯದಲ್ಲಿ ಲಿಂಗಸುಗೂರು ನಗರದ ಡಾ. ಸುಧಾಮೂರ್ತಿ ಇನ್ಫೋ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿತ್ತು.

ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಶಿವಕುಮಾರ ದೇಶಮುಖ್ ರವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರಿಗಾಗಿ ಹಲವಾರು ಸೌಲಭ್ಯಗಳನ್ನು ಒದಗಿಸಿದೆ ಪ್ರತಿಯೊಬ್ಬ ಮಹಿಳೆಯು ಅವುಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪುರುಷರಂತೆ ಮಹಿಳೆಯರಿಗೂ ಸಮಾನ ಹಕ್ಕು ನೀಡಲಾಗಿದ್ದು ಮಹಿಳೆಯರಿಗಾಗಿ ನಾನಾ ಯೋಜನೆಗಳನ್ನು ರೂಪಿಸಲಾಗಿದೆ ವಿದ್ಯಾರ್ಥಿವೇತನ, ಕಾಲೇಜಿನಲ್ಲಿ ಪ್ರತ್ಯೇಕ ಸೀಟುಗಳ ಹಂಚಿಕೆ ಸೇರಿದಂತೆ ಶೈಕ್ಷಣಿಕವಾಗಿ ಮುಂಬರಲು ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಜರ್ತಜ್ ಆಫ್ರಿನ್ ಮಾತನಾಡಿ ಮಹಿಳೆಯರು ಪೋಲಿಸ್ ಇಲಾಖೆ, ಸೈನಿಕ ಪಡೆ , ಕ್ರೀಡಾ ವಿಭಾಗ , ಸರ್ಕಾರಿ ಉದ್ಯೋಗ ಸೇರಿದಂತೆ ಹೀಗೆ ಹಲವು ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಅಲ್ಲದೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಸಾಧನೆ ಮಾಡಿರುವುದನ್ನು ನಾವು ಕಾಣಬಹುದು. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ತಾಲೂಕು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ನಾಗರಾಜ ಗಸ್ತಿ ಯವರು ಮಾತನಾಡಿ ಕೇವಲ ಮಹಿಳಾ ದಿನಾಚರಣೆ ಮಾಡಿ ಬಿಡಬಾರದು ಮಹಿಳೆಯರ ಸಮಾಜದ ಉನ್ನತ ಸ್ಥಾನಮಾನ ಪಡೆದುಕೊಂಡು ಸಮಾಜದಲ್ಲಿ ಗೌರವ ಸ್ಥಾನದಿಂದ ಬದುಕಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾನೂನು ಸಮಿತಿಯ ಸಹಾಯಕ ಸರ್ಕಾರಿ ಅಭಿಯೋಜಕ ವಸಂತ ಪಾಟೀಲ್ , ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶರಣಮ್ಮ ಕಾರನೂರು, ವಕೀಲರ ಸಂಘದ ಕಾರ್ಯದರ್ಶಿ ಶರಣಬಸವ ಪಟ್ಟಣಶೆಟ್ಟಿ, ವಕೀಲರಾದ ತಸ್ಲಿಮ್ ಕಾಲೇಜಿನ ಆಡಳಿತಾಧಿಕಾರಿ ವಿನೋದ ಗುಡಿಮನಿ, ಪ್ರಾಚಾರ್ಯರಾದ ಶರಣಮ್ಮ, ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿನಿಯರು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Don`t copy text!