ಮಸ್ಕಿ ಪುರಸಭೆ ಬಿಜೆಪಿ ಮಡಿಲಿಗೆ ಅದ್ಯಕ್ಷರಾಗಿ ವಿಜಯ ಲಕ್ಷ್ಮಿ ಬಿ‌. ಪಾಟೀಲ, ಉಪಾದ್ಯಕ್ಷರಾಗಿ ಕವಿತಾ ಮಾಟೂರು ಅವಿರೋಧ ಆಯ್ಕೆ

e-ಸುದ್ದಿ ಮಸ್ಕಿ : ಪುರಸಭೆಯ ಉಳಿದ ಅವದಿಗೆ ಅದ್ಯಕ್ಷರಾಗಿ ಬಿಜೆಪಿಯ ವಿಜಯಲಕ್ಷ್ಮೀ ಬಿ. ಪಾಟೀಲ್ ಹಾಗೂ ಉಪಾದ್ಯಕ್ಷರಾಗಿ ಬಿಜೆಪಿಯ ಕವಿತಾ ಎ. ಮಾಟೂರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಅದ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಹಾಗೂ ಉಪಾದ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ‌ ಮೀಸಲಾಗಿತ್ತು. ಅದ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಇಬ್ಬರ ಆಯ್ಕೆ ಅವಿರೋಧವಾಗಿದೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟೀಮನಿ ಘೋಷಿಸಿದರು.


ಅದ್ಯಕ್ಷ ಹಾಗೂ ಉಪಾದ್ಯಕ್ಷ ಆಯ್ಕೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭಮಾಚರಣೆ ಮಾಡಿದರು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಬಿಜೆಪಿ ಜಿಲ್ಲಾ ಘಟಕದ ಅದ್ಯಕ್ಷ ರಾಮಾನಂದ ಯಾದವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ್, ಮಂಡಲ ಅದ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಸೇರಿದಂತೆ ಮುಖಂಡರು ಇದ್ದರು.

Don`t copy text!