ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವ- ಶಾಸಕ ಹೂಲಗೇರಿ.
ವರದಿ- ವಿರೇಶ ಅಂಗಡಿ. ಗೌಡೂರು
ಜಿಲ್ಲಾ ಪಂಚಾಯತಿ ರಾಯಚೂರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಲಿಂಗಸುಗೂರು ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ- ಏಪ್ರಿಲ್ 2022 ರಲ್ಲಿ ನಡೆಯಲಿರುವ SSLC ಪರೀಕ್ಷಾ ಸಿಬ್ಬಂದಿಗಳ ಪೂರ್ವ ಸಿದ್ದತಾ ಸಭೆಯನ್ನು ಲಿಂಗಸುಗೂರು ಪಟ್ಟಣದ ಜಿ.ಟಿ.ಟಿ.ಸಿ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು.
ಲಿಂಗಸುಗೂರು ಶಾಸಕ ಡಿ. ಎಸ್.ಹೂಲಗೇರಿಯವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಎಸ್. ಎಸ್.ಎಲ್.ಸಿ ಪರಿಕ್ಷೆಯಲ್ಲಿ ನಕಲು ನಡೆಯದ ಹಾಗೆ ವಿವಿಧ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಫಲಿತಾಂಶದಲ್ಲಿ ಜಿಲ್ಲೆಯಲ್ಲಿಯೇ ಲಿಂಗಸುಗೂರು ತಾಲ್ಲೂಕನ್ನು ಮೊದಲ ಸ್ಥಾನದಲ್ಲಿ ತರಲು ಶ್ರಮಿಸಬೇಕಾಗಿದೆ. ಶಾಲೆಯ ಶಿಕ್ಷಕರು ಸರ್ಕಾರಿ ಶಾಲೆ ನಮ್ಮದು ಯಾವುದೇ ಖಾಸಗಿ ಶಾಲೆಗೂ ನಮ್ಮ ಶಾಲೆಯೂ ಯಾವುದರಲ್ಲೂ ಕಡಿಮೆಯಿಲ್ಲ ಎನ್ನುವ ಮನೋಭಾವದೊಂದಿಗೆ ಭೋದನೆ ಮಾಡುವಂತಾಗಬೇಕು ಎಂದರು.
ಪಿಯುಸಿ ಶಿಕ್ಷಣಕ್ಕೆ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರಿಣಾಮಕಾರಿ ಬೋಧನೆ ಅತ್ಯವಶ್ಯಕವಾಗಿದ್ದು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪರಿಕ್ಷೆಗಾಗಿ ಮಕ್ಕಳಿಗೆ ಸಾರಿಗೆ ಇಲಾಖೆಯಿಂದ ವ್ಯವಸ್ಥೆಯನ್ನು ಕಲ್ಪಿಸಲಾಗುವದು. ಪರಿಕ್ಷೆಯಲ್ಲಿ ಯಾವುದೇ ರೀತಿಯ ಗೊಂದಲಗಳು ಬಾರದ ಹಾಗೆ ಸೂಸುತ್ರವಾಗಿ ನಡೆಸಲು ಪರಿಕ್ಷಾ ಮೇಲ್ವಿಚಾರಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಬಲರಾಮ ಕಟ್ಟಿಮನಿ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ,ಸಿಪಿಐ ಮಹಾಂತೇಶ ಸಜ್ಜನ, ಪುರಸಭೆ ಅಧ್ಯಕ್ಷೆ ಸುನಿತಾ ಪರುಶುರಾಮ ಕೆಂಬಾವಿ, ಉಪಾಧ್ಯಕ್ಷ ಮಹಮದ್ ರಫಿ ಸೇರಿದಂತೆ ತಾಲೂಕಿನ ಪ್ರೌಢಶಾಲೆಯ ಮುಖ್ಯ ಗುರುಗಳು ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.